ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಫುಲ್ ಬರಿ ಪ್ರದೇಶದಲ್ಲಿ ನಡೆದಿದೆ.
ಅಂತ್ಯಸಂಸ್ಕಾರಕ್ಕೆಂದು ಮೃತ ವ್ಯಕ್ತಿಯ ಶವಸಾಗಿಸುತ್ತಿದ್ದ ವಾಹನ ಟ್ರಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಹನ್ಸ್ ಖಲಿ ಠಾಣೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಕಲ್ಲು ತುಂಬಿದ್ದ ಟ್ರಕ್ ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ದುರ್ಘಟನೆಗೆ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲರು ಕಂಬನಿ ಮಿಡಿದಿದ್ದಾರೆ.
`ಪ್ರಗತಿ ಮೀಡಿಯಾ ಹೌಸ್’ ನಿಂದ ಮತ್ತೊಂದು ಕೊಡುಗೆ: ಇಂಗ್ಲೀಷ್ ನ್ಯೂಸ್ ಪೋರ್ಟಲ್ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ