ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳ ಹೆನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರಕ್ಕೆ ರಾಜ್ಯ ಸರ್ಕಾರ ಸೂಚಿಸಿದ್ದು, ಬೆಳಗಾವಿ ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
ಗಡಿಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ವೈದ್ಯರೊಬ್ಬರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಘಟನೆ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸರು ಗಡಿಯಲ್ಲಿ ಪರಿಶೀಲನೆ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದಿಂದ ಆಗಮಿಸಿದ ಡಾ.ಸ್ವಾಮಿ ನಂದಿಮಠ ಎಂಬುವವರು ಕೋವಿಡ್ ನೆಗೆಟಿವ್ ವರದಿ, ಲಸಿಕೆ ಇಲ್ಲದೇ ಪ್ರಯಾಣಿಸಿದ್ದಕ್ಕೆ ಕೊಗನೊಳ್ಳಿ ಗಡಿಯಲ್ಲೇ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ವೈದ್ಯರ ನಡುವೆ ಜಟಾಪಟಿ ನಡೆದಿದೆ.
ಪೊಲೀಸರ ಕೊರಳ ಪಟ್ಟಿಯನ್ನೇ ಹಿಡಿದ ವೈದ್ಯ ವಾಗ್ವಾದಕ್ಕಿಳಿದಿದ್ದಾರೆ. ಕೈ ಕೈ ಮಿಲಾಯಿಸುವ ಹಂತಕ್ಕೂ ಜಟಾಪಟಿ ನಡೆದಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸದೇ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ವೈದ್ಯರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ