ಡಿಸೆಂಬರ್ 27ರಂದು ಮತದಾನ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
5 ನಗರಸಭೆ, 19 ಪುರಸಭೆ, 34 ಪ.ಪಂಚಾಯತ್, ಸ್ಥಳೀಯ ಸಂಸ್ಥೆಗಳ 1185 ವಾರ್ಡ್ ಗಳಿಗೆ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೇ ದಿನ ನಾಮಪತ್ರ ವಾಪಸ್ ಪಡೆಯಲು ಡಿ.18 ಕೊನೆ ದಿನವಾಗಿದೆ.
ಇಲ್ಲಿದೆ ನೋಟಿಫಿಕೇಶನ್ – 20211129071858225
ನಾನಾಗಿದ್ರೆ ಒಂದು ಗಂಟೆಯೂ ಉಳಿಸಿಕೊಳ್ತಿರಲಿಲ್ಲ – ಡಿ.ಕೆ.ಶಿವಕುಮಾರ ಕಿಡಿ ಕಿಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ