ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ರಚನೆಯೇ ದೋಷಪೂರಿತವಾದದ್ದು ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಈ ವೇಳೆ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತನಿಖಾ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಲು ಸಿದ್ಧವಾಗಿದ್ದು, ತನಿಖಾ ವರದಿಗೆ ಎಸ್ ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಎಸ್ ಐಟಿ ಎಸ್ ಪಿಪಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ಈ ವೇಳೆ ಎಸ್ ಐಟಿ ಅಂತಿಮ ವರದಿ ಸಲ್ಲಿಕೆಗೆ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದು, ಆರೋಪಿ ಮಾಜಿ ಸಚಿವರ ಮನವಿ ಮೇರೆಗೆ ಎಸ್ ಐಟಿ ರಚಿಸಲಾಗಿದೆ. ಹೀಗಾಗಿ ಎಸ್ ಐಟಿ ರಚನೆಯೇ ದೋಷಪೂರಿತ ಎಂದು ವಾದ ಮಂಡಿಸಿದರು.
ಈ ವೇಳೆ ಮಾತನಾಡಿದ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ಸಚಿವರಾದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ನಾವು ಯಾರಿಗೂ ಕೇರ್ ಮಾಡಲ್ಲ ಎಂದರು.
ಸಿಡಿ ಬಹಿರಂಗ ಪ್ರಕರಣದ ಅಂತಿಮ ವರದಿ ಸಲ್ಲಿಸದಂತೆ ಮಧ್ಯಂತರ ಆದೇಶವಿದ್ದು, ಮಧ್ಯಂತರ ಆದೇಶ ತೆರವಿಗೆ ಎಸ್ ಐಟಿ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅರ್ಜಿ ಸಲ್ಲಿಸಿದ ಬಳಿಕ ಈ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಒಮಿಕ್ರಾನ್ ಭೀತಿ: ರಾಜ್ಯ ಸರ್ಕಾರಕ್ಕೆ ತಜ್ಞರು ನೀಡಿದ ಸಲಹೆಗಳೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ