Latest

ಹತ್ಯೆಗೆ ಸ್ಕೆಚ್; ವಿಚಾರಣೆಗೆ ಹಾಜರಾದ ಎಸ್.ಆರ್.ವಿಶ್ವನಾಥ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಶ್ವನಾಥ್ ರಾಜಾನುಕುಂಟೆ ಪೊಲಿಸ್ ಠಾಣೆಗೆ ಹಾಜರಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರು ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಆಡಿವೋ, ವಿಡಿಯೋ ಬಹಿರಂಗವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ನೀಡಿದ ನೋಟೀಸ್ ಹಿನ್ನೆಲೆಯಲ್ಲಿ ವಿಶ್ವನಾಥ್ ವಿಚಾರಣೆಗೆ ಹಾಜರಾಗಿದ್ದಾರೆ.

Home add -Advt

ಈ ವೇಳೆ ಮಾತನಾಡಿದ ವಿಶ್ವನಾಥ್, ನನ್ನ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ದೂರು ನೀಡಿದ್ದೆ. ಪೊಲೀಸರು ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ. ಆಡಿಯೋ, ವಿಡಿಯೋ ಕುರಿತು ಹಾಗೂ ತನಿಖಾಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಎಲ್ಲಾ ದಾಖಲೆಗಳನ್ನು ಒಪ್ಪಿಸುತ್ತೇನೆ. ಸಮಗ್ರ ತನಿಖೆ ನಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮುದ್ರದಲ್ಲಿ ಮುಳುಗಿದ 15 ಬೋಟ್ ಗಳು; 8ಕ್ಕೂ ಹೆಚ್ಚು ಜನರು ನಾಪತ್ತೆ

Related Articles

Back to top button