Latest

ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ನಟ ಶಿವರಾಮ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ ಹಿರಿಯ ನಟ ಶಿವರಾಮ್ ಗಂಭೀರವಾಗಿ ಗಾಯಗೊಂಡಿದ್ದರು. ಹೊಸಕೆರೆಹಳ್ಳಿಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಶಿವರಾಮ್ ಮನೆಗೆ ಮರಳಿದ್ದರು. ಆದರೆ ಮನೆಗೆ ಬಂದ ಬಳಿಕ ಅವರಿಗೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಈ ಕುರಿತು ಶಿವರಾಮ್ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಶ್ರಾವವಾಗಿರುವ ಬಗ್ಗೆ ತಿಳಿದುಬಂದಿದೆ. ವೈದ್ಯರು ಸರ್ಜರಿ ಮಾಡಬೇಕು ಎಂದಿದ್ದಾರೆ. ಆದರೆ ತಂದೆಗೆ ವಯಸ್ಸಾಗಿರುವುದರಿಂದ ಸರ್ಜರಿ ಮಾಡಲು ಸಾಧ್ಯವಿಲ್ಲ. ಸಧ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದರು.
ಹತ್ಯೆಗೆ ಸ್ಕೆಚ್; ವಿಚಾರಣೆಗೆ ಹಾಜರಾದ ಎಸ್.ಆರ್.ವಿಶ್ವನಾಥ್

Related Articles

Back to top button