ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಹೊಸ ರೂಪಾಂತರಿ ತಳಿ ವೇಗವಾಗಿ ಹರಡುತ್ತೆ. ಆದರೆ ಜೀವಕ್ಕೆ ಅಪಾಯವಿಲ್ಲ ಎಂದು ಸಚಿವ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ಕಟ್ಟೆಚ್ಚರವಹಿಸಿದೆ. ಒಮಿಕ್ರಾನ್ ಪತ್ತೆಯಾಗಿರುವ ಇಬ್ಬರು ಸೋಂಕಿತರ ಸಂಪರ್ಕದಲ್ಲಿರುವವರನ್ನು ಐಸೋಲೇಷನ್ ಮಾಡಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಒಮಿಕ್ರಾನ್ ನಿಂದ ಅಪಾಯವಿಲ್ಲ ಎಂದು ಹೇಳಿದರು.
ಒಮಿಕ್ರಾನ್ ತೀವ್ರತೆ ಯಾವರೀತಿ ಇರುತ್ತದೆ. ಪರಿಣಾಮವೇನು ಎಂಬ ಬಗ್ಗೆ ತಜ್ಞರ ತಂಡ ಅಂಧ್ಯಯನ ನಡೆಸಿದೆ. ಒಮಿಕ್ರಾನ್ ವೇಗವಾಗಿ ಹಡುತ್ತದೆ ಆದರೆ ಜೀವಕ್ಕೆ ಅಪಾಯವಿಲ್ಲ ಎಂದಿದ್ದಾರೆ. ಈಗಾಗಲೇ ಪತ್ತೆಯಾಗಿರುವ 11 ದೇಶಗಳ ಸೋಂಕಿತರ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
SHOCKING NEWS – ಕರ್ನಾಟಕಕ್ಕೆ ಒಮಿಕ್ರಾನ್ ಎಂಟ್ರಿ; ದೇಶದಲ್ಲೇ ಮೊದಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ