Latest

ಮತ್ತೆ ಬಂದ್ ಆಗುತ್ತಾ ಶಾಲೆಗಳು…? ಹೆಮ್ಮಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಕ್ಷಣ ಸಚಿವರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದ್ದು, ಕೆಲ ಶಾಲಾ-ಕಾಲೇಜುಗಳಲ್ಲಿ ಮಹಾಮಾರಿ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗಲಿವೆಯೇ ಎಂಬ ಚರ್ಚೆ ಆರಂಭವಾಗಿದೆ. ಅಲ್ಲದೇ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುವ ಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿದ್ಯಾರ್ಥಿಗಳು, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಕೊರೊನಾ ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ. ವಸತಿ, ನವೋದಯ ಶಾಲೆಗಳಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕೋವಿಡ್ ಬಗ್ಗೆ ತಜ್ಞರಿಂದ ಪ್ರತಿದಿನ ವರದಿ ಪಡೆಯುತ್ತಿದ್ದೇನೆ. ವರದಿ ಪ್ರಕಾರ ತಕ್ಷಣಕ್ಕೆ ಯಾವುದೇ ಆತಂಕ ಇಲ್ಲ. ಪೋಷಕರು ಕೂಡ ಗಾಬರಿ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕೆಲ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ವಿಚಾರವಾಗಿ ಮಾತನಾಡಿದ ಸಚಿವರು, 1-10ನೇ ತರಗತಿ ಶಾಲೆಗಳಲ್ಲಿ ಕೊರೊನಾ ಸೋಂಕು ಇಲ್ಲ, ವಸತಿ ಶಾಲೆಗಳಲ್ಲಿ ಪ್ರಕರಣ ಹೆಚ್ಚುತ್ತಿದೆ. ಕೊರೊನಾ ಕೇಸ್ ತೀವ್ರ ಹೆಚ್ಚಳವಾದರೆ ಶಾಲೆಗಳನ್ನು ಬಂದ್ ಮಾಡಲು ನಾವು ಸಿದ್ಧರಿದ್ದೇವೆ. ಪರೀಕ್ಷೆಗಳಲ್ಲಿ ದೈಹಿಕ ಅಂತರ ನಿಯಮ ಪಾಲನೆ ಆಗುತ್ತಿದೆ. ಕೋವಿಡ್ ಮಾರ್ಗಸೂಚಿಗಳನ್ನು ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಕೇಸ್ ಇನ್ನಷ್ಟು ಹೆಚ್ಚಬಹುದು. ಆ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ಬರುವ ನಿರೀಕ್ಷೆ ಇದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಅಪ್ಪು ಕನಸಿನ ’ಗಂಧದ ಗುಡಿ’ ಟೀಸರ್ ಬಿಡುಗಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button