Latest

ಹುಲಿಯಂತಿದ್ದವನು ಇಲಿಯಂತಾಗಿದ್ದೀನಿ; ಸಿದ್ದರಾಮಯ್ಯ ನನ್ನ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ; ವೇದಿಕೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ

ಪ್ರಗತಿವಾಹಿನಿ ಸುದ್ದಿ; ಬಾದಾಮಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ವೇದಿಕೆಯಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಬಾದಾಮಿಯಲ್ಲಿ ನಡೆದ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿ.ಬಿ.ಚಿಮ್ಮನಕಟ್ಟಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ. ಅವರು ಬೇಕಿದ್ದರೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಲಿ. ಬಾದಾಮಿ ನನ್ನ ಕ್ಷೇತ್ರ ಎಂದು ಗುಡುಗಿದ್ದಾರೆ.

ನನ್ನ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿ ಸಿದ್ದರಾಮಯ್ಯ ಗೆದ್ದಿದ್ದಾರೆ. ನನ್ನ ಕ್ಷೇತ್ರದಲ್ಲಿ ನನ್ನನ್ನು ತಡೆದಿದ್ದಾರೆ. ಶಾಸಕನನ್ನಾಗಿ ಮಾಡ್ತೀನಿ ಎಂದು ಹೇಳಿ ವಂಚಿಸಿದರು. ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದರು,

ನಾನು ಐದಾರು ಸಲ ಶಾಸಕ, ಸಚಿವನು ಕೂಡ ಆಗಿದ್ದವನು. ಹುಲಿಯಂತಿದ್ದ ನಾನು ಇಲಿಯಂತಾಗಿದ್ದೇನೆ, ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ನಾನು ಸ್ಪರ್ಧಿಸಿ ಶಾಸಕ, ಸಚಿವ, ಸಿಎಂ ಕೂಡ ಆಗ್ತೀನಿ….ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ಮುಂದೆ ನಾನು ಕಣ್ಣೀರು ಹಾಕಲ್ಲ ಎಂದ ಕುಮಾರಸ್ವಾಮಿ

Home add -Advt

Related Articles

Back to top button