ಪ್ರಗತಿವಾಹಿನಿ ಸುದ್ದಿ; ಲಖನೌ: ಪ್ರಾಕ್ಟಿಕಲ್ ಎಕ್ಸಾಂ ನೆಪದಲ್ಲಿ 10ನೇ ತರಗತಿಯ 17 ವಿದ್ಯಾರ್ಥಿನಿಯರಿಗೆ ಮಾದಕ ದ್ರವ್ಯ ನೀಡಿ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಶಾಲೆಗಳ ವ್ಯವಸ್ಥಾಪಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಇಬ್ಬರು ವ್ಯವಸ್ಥಾಪಕರು ಪುರ್ಕಾಜಿ ಪಟ್ಟಣದವರಾಗಿದ್ದು, 17 ಬಾಲಕಿಯರಿಗೆ ಜಿಜಿಎಸ್ ಅಂತರಾಷ್ಟ್ರೀಯ ಶಾಲೆಯಲ್ಲಿ ಕಿರುಕುಳ ನೀಡಿದ್ದಾರೆ. ವಿದ್ಯಾರ್ಥಿನಿಯರಿಗೆ ಅಮಲಿನ ಆಹಾರ ನೀಡಿ ಕಿರುಕುಳ ಕೊಡಲಾಗಿದೆ. ವಿಷಯ ಬಾಯ್ಬಿಟ್ಟರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ, ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಕೆಹಾಕಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರಿಗೆ ದೂರು ನೀಡಿದರೂ ಶಾಲಾ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಂಡಿಲ್ಲ, ಅದರ ಬದಲು ವ್ಯವಸ್ಥಾಪಕರ ವಿರುದ್ಧ ಅಪಪ್ರಚಾರ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದಡಿ ಸ್ಥಳೀಯ ಪತ್ರಕರ್ತನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಾರೆ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪಿಸಿದ್ದಾರೆ.
ಪ್ರಕರಣ ನಡೆದು 15 ದಿನಗಳು ಕಳೆದಿದ್ದು, ಇದೀಗ ಬಿಜೆಪಿ ಶಾಸಕ ಪ್ರಮೋದ್ ಉಟ್ವಾಲ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಪ್ರತ್ಯೇಕ ಮಾರ್ಗಸೂಚಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ