Latest

ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್…?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿದ್ ಬಗ್ಗೆ ತಜ್ಞರಿಂದ ಮಾಹಿತಿ ಕಲೆ ಹಾಕಲಾಗಿದೆ. ಮುಂಜಾಗೃತಾ ಕ್ರಮವಗೈ ಯಾವರೀತಿ ಮಾರ್ಗಸೂಚಿ ಜಾರಿ ಮಾಡಬೇಕು ಎಂಬ ಬಗ್ಗೆಯೂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ಕಠಿಣ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದರು.

ಬೆಡ್, ಆಕ್ಸಿಜನ್, ಲ್ಯಾಬ್ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ದೇಶ-ವಿದೇಶಗಳಲ್ಲಿನ ಒಮಿಕ್ರಾನ್ ಸ್ಥಿತಿಗತಿ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಎಲ್ಲಾ ವಿಚಾರಗಳನ್ನು ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಬಳಿಕ ರಾಜ್ಯಕ್ಕೆ ಅನ್ವಯವಾಗುವಂತಹ ಹೊಸ ಮಾರ್ಗಸೂಚಿ ಜಾರಿ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
2 ಡೋಸ್ ಲಸಿಕೆ ಕಡ್ಡಾಯ…!

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button