ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ದುರ್ಗಮ ಮಾರ್ಗದಲ್ಲಿ ಇಂದು ಮಧ್ಯಾಹ್ನ ಪತನಗೊಂಡಿತ್ತು. ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಹೆಲಿಕಾಪ್ಟರ್ ದುರಂತದಲ್ಲಿ 14 ಜನರ ಪೈಕಿ 13 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.
ದುರಂತದಲ್ಲಿ ಮಡಿದವರ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸೇನಾ ಹೆಲಿಕಾಪ್ಟರ್ ಪತನ: 11 ಜನರು ದುರ್ಮರಣ; ರಾವತ್ ಸ್ಥಿತಿ ಚಿಂತಾಜನಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ