
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೆ ಇಬ್ಬರಲ್ಲಿ ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಗುಜರಾತ್ ನಲ್ಲಿ ಇಬ್ಬರಿಗೆ ಹೊಸದಾಗಿ ಒಮಿಕ್ರಾನ್ ಸೋಂಕು ಪತೆಯಾಗಿದ್ದು, ಅವರಲ್ಲಿ ಓರ್ವ ದಕ್ಷಿಣ ಆಫ್ರಿಕಾದಿಂದ ಜಮ್ನಾ ನಗರಕ್ಕೆ ಬಂದವರಾಗಿದ್ದಾರೆ. ಆತನ ಸಂಪರ್ಕದಲ್ಲಿದ್ದ ಇನ್ನೋರ್ವ ವ್ಯಕ್ತಿಯಲ್ಲಿಯೂ ರೂಪಾಂತರಿ ತಳಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಒಮಿಕ್ರಾನ್ ಪತ್ತೆಯಾದ ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿ 2 ಡೋಸ್ ವ್ಯಾಕ್ಸಿನ್ ಪಡೆದುಕೊಂಡವರಾಗಿದ್ದಾರೆ ಎಂದು ತಿಳಿದುಬಂದಿದೆ.
ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ