ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ ರಾಜ್ಯದಲ್ಲಿ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಎಂಎಲ್ ಸಿ ತುಳಸಿ ಮುನಿರಾಜುಗೌಡ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಮುಂದಾಗಿದ್ದು, ಚರ್ಚೆ ಪೂರ್ಣಗೊಂಡರೆ ಈಬಾರಿಯೇ ಕಾಯ್ದೆ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಬಲಾತ್ಕಾರದ ಮತಾಂತರದ ಬಗ್ಗೆ ಕೇಳಿಬರುತ್ತಿದೆ. ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ, ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆ ಜಾರಿ ಬಗ್ಗೆ ಚರ್ಚೆಯಾಗಬಹುದು. ಕೆಲ ತಿದ್ದುಪಡಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
7 ರಾಜ್ಯಗಳಲ್ಲಿ ಮತಾಂತರ ನಿಷ್ಧ ಕಾಯ್ದೆ ಜಾರಿ ಇದ್ದು, ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಬೇಕು. ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಮಸೂದೆ ಮಂಡನೆ ಮಾಡಬೇಕು ಎಂದು ಶ್ರೀರಾಮಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.
ಆದರೆ ಮಸೂದೆ ಬಗ್ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ರಾಜ್ಯದ ವಿಚಾರವಲ್ಲ, ಅಂತರಾಷ್ಟ್ರೀಯ ವಿಚಾರ. ಸಮುದಾಯಗಳನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಖಾಸಗಿಯಾಗಿ ಮಸೂದೆ ಮಂಡನೆಗೆ ಪ್ಲಾನ್ ಮಾಡಿದೆ. ಇದರಿಂದ ರಾಜಕೀಯದ ಮೇಲೂ ಪ್ರಭಾವ ಬೀರಲಿದೆ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ನಡುವೆ ಕ್ರಿಶ್ಚಿಯನ್ ನಿಯೋಗ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಕ್ರೈಸ್ತರು ಎದುರಿಸುತ್ತಿರುವ ಸಮಸ್ಯೆ ಪರಿಹಾರ ಹಾಗೂ ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಪಾರಾಮರ್ಶಿಸುವಂತೆ ಮನವಿ ಮಾಡಿದೆ.
ಖ್ಯಾತ ನಿರ್ದೇಶಕ ಹಿಂದೂ ಧರ್ಮಕ್ಕೆ ಮತಾಂತರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ