Latest

ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ…!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾದಿಂದ ಬಂದಿರುವ 34 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ದೃಢವಾಗಿದ್ದು, ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಟೆಸ್ಟ್ ಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ; ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದ ಸಿಎಂ

Related Articles

Back to top button