ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಶಾಸಕಿ ಅಂಜಲಿ ನಿಂಬಾಳ್ಕರ್ ಸುವರ್ಣಸೌಧ ಚಲೋ ಪಾದಯಾತ್ರೆ ಆರಂಭಿಸಿದ್ದಾರೆ.
ಭಾನುವಾರ ಖಾನಾಪುರದಿಂದ ಪಾದಯಾತ್ರೆ ಆರಂಭಿಸಿದ್ದು, ಸೋಮವಾರ ಅಧಿವೇಶನದ ಸ್ಥಳಕ್ಕೆ ತಲುಪಲಿದ್ದಾರೆ.
ಖಾನಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಅವರು ಖಾನಾಪುರದಿಂದ ಸುವರ್ಣ ವಿಧಾನಸೌಧಕ್ಕೆ ಪಾದಯತ್ರೆ ಆರಂಭಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಮವಾರ ಪಾದಯಾತ್ರೆ ಸೇರಿಕೊಂಡು ಸುವರ್ಣ ಸೌಧಕ್ಕೆ ಆಗಮಿಸುವ ಸಾಧ್ಯತೆ ಇದೆ.
ಈ ಕುರಿತು ಮಾತನಾಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್, ಪ್ರವಾಹದಿಂದ ಖಾನಾಪುರದಲ್ಲಿ ಹಾನಿಯಾಗಿದೆ.ರಸ್ತೆ, ಸೇತುವೆ ದುರಸ್ತಿ ಕೆಲಸ ಮಾಡಬೇಕಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕಿದೆ. ಅತಿವೃಷ್ಟಿಯಿಂದ ಬೆಳೆ ಹಾನಿಯಾದವರಿಗೆ ಪರಿಹಾರ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಕಾಂಗ್ರೆಸ್ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಚಲೋ : ಡಾ.ಅಂಜಲಿ ನಿಂಬಾಳಕರ್ ನೇತೃತ್ವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ