ಪ್ರಗತಿವಾಹಿನಿ ಸುದ್ದಿ; ಹಾಸನ: ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಯತ್ನದಲ್ಲೇ ಗೆದ್ದು ಬೀಗಿದ್ದಾರೆ.
ಹಾಸನ ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದರೂ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಹೆಚ್.ಡಿ.ದೇವೇಗೌಡರ ಮೊಮ್ಮಗ, ರೇವಣ್ಣ ಪುತ್ರ ಸೂರಜ್ ರೇವಣ್ಣ ಮೊದಲ ಬಾರಿ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಜೆಡಿಎಸ್ ನಿಂದ ರಾಜಕೀಯ ಅಗ್ನಿಪರೀಕ್ಷೆಗೆ ನಿಂತಿದ್ದರು. ಇದೀಗ ಮೊದಲ ಯತ್ನದಲ್ಲೇ ಸೂರಜ್ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ವಿರುದ್ಧ ಸೂರಜ್ ರೇವಣ್ಣ 1000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಮೇಲ್ಮನೆಗೆ ಪ್ರವೇಶಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ