Karnataka NewsLatest

ಬೆಳಗಾವಿ ಅಧಿವೇಶನದ ಮಂಗಳವಾರ ಕಲಾಪದ ಸಮಗ್ರ ಸುದ್ದಿ

ಪಿಡಬ್ಲ್ಯೂಡಿ ಇಂಜನಿಯರಿಂಗ್ ನೇಮಕಾತಿ ಪರೀಕ್ಷೆ:
ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ:ಸಚಿವ ಈಶ್ವರಪ್ಪ

ಕರ್ನಾಟಕ ಲೋಕಸೇವಾ ಆಯೋಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರ ಹಾಗೂ ಕಿರಿಯ ಅಭಿಯಂತರರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯಿಂದ ವಂಚಿತರಾದ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗೆ ಮತ್ತೊಮ್ಮೆ ಅವಕಾಶ ನೀಡಬೇಕೆ ಎನ್ನುವುದರ ಕುರಿತು ಚರ್ಚಿಸಿ ತೀರ್ಮಾನಿಸಲಾಗುವುದು;ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಲಾಗುವುದೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಸದನಕ್ಕೆ ತಿಳಿಸಿದರು.
ಸದಸ್ಯರಾದ ಶ್ರೀಕಂಠೇಗೌಡ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಕರ್ನಾಟಕ ಲೋಕಸೇವಾ ಆಯೋಗ ಮಂಗಳವಾರ ನಿಗದಿಪಡಿಸಿದ ಇಂಜನಿಯರಿಂಗ್ ನೇಮಕಾತಿ ಪರೀಕ್ಷೆ ಅವೈಜ್ಞಾನಿವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಮುಂದೂಡಲ್ಪಟ್ಟ ಲೋಕೋಪಯೋಗಿ ಇಲಾಖೆಯ ಇಂಜನಿಯರಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳನ್ನು ದಕ್ಷಿಣ ಕರ್ನಾಟಕ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆಯೋಗ ನಿಯಮ ಹೊರಡಿಸಿದೆ. ಪರೀಕ್ಷಾ ದಿನವಾದ ಮಂಗಳವಾರ ಉದ್ಯಾನ ಎಕ್ಸ್‌ಪ್ರೆಸ್, ಬಸವ, ಕರ್ನಾಟಕ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳು ನಿಗದಿತ ಸಮಯಕ್ಕಿಂತ ವಿಳಂಬವಾಗಿ ತಲುಪಿದ ಕಾರಣ ಸಾವಿರಾರು ಪರೀಕ್ಷಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗದೇ ವಂಚಿತರಾಗಿದ್ದಾರೆ. ಉದ್ಯೋಗ ಹೊಂದುವ ಕನಸು ಮರಿಚಿಕೆಯಾಗಿದೆ. ಕಾರಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರ ಕೆ.ಎಸ್. ಈಶ್ವರಪ್ಪ ಅವರು ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮವಹಿಸಲಿದೆ ಎಂದರು.
ಇದೇ ವಿಷಯ ವಿಧಾನ ಸಭೆಯಲ್ಲೂ ಪ್ರಸ್ತಾಪಗೊಂಡಿದ್ದು, ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ. ಮಾಧುಸ್ವಾಮಿ ಅವರು ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳ ಹಿತ ಕಾಪಾಡಲಾಗುವುದು. ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
***
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ಪರಿಶೀಲನೆ

 

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ನಾಮಕರಣ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಅವರು ಮೇಲ್ಮನೆಗೆ ಹೇಳಿದರು.
ಸದಸ್ಯರಾದ ಹರೀಶಕುಮಾರ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಅಭಿಪ್ರಾಯದಂತೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಅವರು ಹೆಸರು ನಾಮಕರಣ ಮಾಡಲು ಸರ್ಕಾರ ಕ್ರಮ ವಹಿಸಬೇಕೆಂದು ಮನವಿ ಮಾಡಿಕೊಂಡರು.
***
ಬೆಳೆ ಪರಿಹಾರ ಹೆಚ್ಚಳ: ಕೇಂದ್ರಕ್ಕೆ ಮನವಿ

 

ಬೆಳೆ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ನು ಪರಿಷ್ಕರಿಸಿ ಹೆಚ್ಚಿನ ಪರಿಹಾರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದರು.
ಮೇಲ್ಮನೆಯಲ್ಲಿ ಹಿರಿಯ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅತೀವೃಷ್ಟಿಯಿಂದ ಹಾನಿಯಾದ ಬೆಳೆಗಳ ಪರಿಹಾರ ಪಾವತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಒಂದು ಹೆಕ್ಟೇರ್ ಖುಷ್ಕಿ ಪ್ರದೇಶದ ಕೃಷಿ ಬೆಳೆ ಹಾನಿಗೆ ೬,೮೦೦ ರೂ.., ನೀರಾವರಿ ಕ್ಷೇತ್ರಕ್ಕೆ ೧೩,೫೦೦ ರೂ. ಹಾಗೂ ಬಹು ವಾರ್ಷಿಕ ಬೆಳೆಗೆ ೧೮,೦೦೦ ರೂ.ಗಳಂತೆ ಪರಿಹಾರ ಪಾವತಿಸಲಾಗುತ್ತಿದೆ. ೧೨ ಲಕ್ಷ ರೈತರಿಗೆ ೭೮೭ ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಪ್ರತಿ ೫ ವರ್ಷಕ್ಕೊಮ್ಮೆ ಪರಿಹಾರ ದರ ಪರಿಷ್ಕೃತಗೊಳ್ಳುತ್ತಿದೆ. ೨೦೧೫ ರಲ್ಲಿ ದರ ಪರಿಷ್ಕೃತಗೊಂಡಿರುತ್ತದೆ. ಪರಿಹಾರ ಧನ ಪರಿಷ್ಕರಿಸಿ ಹೆಚ್ಚಿನ ಪರಿಹಾರ ನಿಗದಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಸದನಕ್ಕೆ ತಿಳಿಸಿದರು.
****
ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ: ಸಚಿವ ಆರ್. ಅಶೋಕ

ರಾಜ್ಯದಲ್ಲಿರುವ ತಾಂಡಾಗಳು ಹಾಗೂ ಹಟ್ಟಿಗಳು ಸೇರಿದಂತೆ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಲು ಸರ್ಕಾರ ಪ್ರಮುಖ ವಿಚಾರವಾಗಿ ಪರಿಗಣ ಸಿದೆ ಎಂದು ರಾಜ್ಯದ ಕಂದಾಯ ಸಚಿವರಾದ ಆರ್. ಅಶೋಕ ಅವರು ಮೇಲ್ಮನೆಗೆ ತಿಳಿಸಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯರಾದ ಪ್ರಕಾಶ ರಾಠೋಡ ಅವರು ಲಂಬಾಣ ತಾಂಡಾಗಳಲ್ಲಿರುವ ಬಡತನ, ಅನಕ್ಷರತೆ, ಮಕ್ಕಳ ಅಸುರಕ್ಷತೆ ಕುರಿತಂತೆ ಗಮನ ಸೆಳೆದು ಉದ್ಯೋಗ ಹುಡುಕಿ ರಾಯಚೂರು ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಕಬ್ಬು ಕಟಾವಿಗೆ ಬಂದ ಕುಟುಂಬವೊಂದರ ಮಗು ಟ್ರ್ಯಾಕ್ಟರ್ ಸಿಲುಕಿ ಧಾರುಣವಾಗಿ ಸಾವು ಕಂಡಿರುವ ಘಟನೆಯನ್ನು ವಿವರಿಸಿ ಲಂಬಾಣ ಸಮುದಾಯಕ್ಕೆ ಉದ್ಯೋಗ ಸೃಜನೆ, ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಪ್ರತಿ ತಾಂಡಾಗಳಲ್ಲಿ ವಸತಿ ಶಾಲೆಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಕಂದಾಯ ಸಚಿವ ಆರ್. ಅಶೋಕ ಅವರು ಈಗಾಗಲೇ ಸರ್ಕಾರ ಆದ್ಯತೆಯ ಕ್ರಮವಾಗಿ ಜನವಸತಿ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಪರಿಶೀಲಿಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ೩೫೧೩ ಜನವಸತಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪೈಕಿ ೧೪೭೨ ಜನವಸತಿಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ೮೯೮ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಒಮ್ಮೆ ಕಂದಾಯ ಗ್ರಾಮವಾಗಿ ಘೋಷಣೆಯಾದರೆ ಶಿಕ್ಷಣ, ಉದ್ಯೋಗ, ವಸತಿ ಸೇರಿದಂತೆ ಎಲ್ಲಾ ಸೌಕರ್ಯಗಳು ಕಲ್ಪಿಸಲಾಗುವುದು ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಯ ೨೯೩ ಖಾಲಿ ಹುದ್ದೆ ಭರ್ತಿಗೆ ಕ್ರಮ

ನೇರ ನೇಮಕಾತಿಯಡಿ ಖಾಲಿಯಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮೂಲ ವೃಂದ ೨೯೩ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುತ್ತಿದೆ ಎಂದು ಪೌರಾಡಳಿತ ಹಾಗೂ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆ ಸಚಿವರಾದ ಎನ್. ನಾಗರಾಜ್ ಎಂ.ಟಿ.ಬಿ. ಅವರು ತಿಳಿಸಿದ್ದಾರೆ.
ಮೇಲ್ಮನೆಯಲ್ಲಿಂದು ಸದಸ್ಯ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು ಪೌರಾಡಳಿತ ಇಲಾಖೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ೨೫,೬೨೭ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ವಿವಿಧ ವೃಂದದ ೧೨,೫೮೧ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ವೃಂದದ ೧೧೦೪ ಹುದ್ದೆಗಳ ಭರ್ತಿಗೆ ಕ್ರಮಕೈಗೊಂಡಿದ್ದು, ಅಂತಿಮ ಪಟ್ಟಿಯನ್ನು ಸ್ವೀಕರಿಸಲಾಗಿದೆ. ಈ ಪೈಕಿ ೭೬೯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ೭೨೧ ಅಭ್ಯರ್ಥಿಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ನಿರ್ದೇಶನಾಲಯದ ೬೯ ವಿವಿಧ ವೃಂದದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ೫೧೯ ಹುದ್ದೆಗಳ ಆಯ್ಕೆ ಪಟ್ಟಿ ಕೆ.ಪಿ.ಎಸ್.ಸಿ. ಯಿಂದ ಸ್ವೀಕೃತವಾಗಬೇಕಾಗಿದೆ ಎಂದು ತಿಳಿಸಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದ ಮಹಾನಗರ ಪಾಲಿಕೆಯಲ್ಲಿನ ೭೨ ಹುದ್ದೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ೨೪ ಹುದ್ದೆಗಳು ಸೇರಿ ಒಟ್ಟು ೮೬ ಹುದ್ದೆಗಳ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಪರಿಶೀಲನೆ ಮಾಡಲಾಗುತ್ತಿದೆ. ಇದರೊಂದಿಗೆ ಮುಂಬಡ್ತಿ ಕೋಟಾದಡಿ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
***
ಸುಸಜ್ಜಿತ ಪೊಲೀಸ್ ಠಾಣೆ ವಸತಿಗೃಹಗಳ ನಿರ್ಮಾಣಕ್ಕೆ ಕ್ರಮ: ಗೃಹಸಚಿವ ಆರಗ ಜ್ಞಾನೇಂದ್ರ

ಪೊಲೀಸರಿಗೆ ಸುಸಜ್ಜಿತವಾದ ವಸತಿಗೃಹ ಹಾಗೂ ಕರ್ತವ್ಯ ನಿರ್ವಹಣೆಗೆ ಎಲ್ಲಾ ಅಗತ್ಯ ಸೌಕರ್ಯಗಳಿರುವ ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಸರ್ಕಾರ ಒತ್ತು ನೀಡಿದೆ. ಪ್ರಸಕ್ತ ಸಾಲಿನಲ್ಲಿ ೧೦೦ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಡಸಿ ಗ್ರಾಮದಲ್ಲಿನ ಹಳೆಯ ಪೊಲೀಸ್ ಠಾಣೆಯು ಶಿಥಿಲಗೊಂಡಿದ್ದ ಪೊಲೀಸ್ ಠಾಣೆಯ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಪೊಲೀಸ್ ಸಿಬ್ಬಂದಿ ಗೌರವಯುತವಾಗಿ ಜೀವನ ನಿರ್ವಹಿಸಲು ಸಾಧ್ಯವಾಗುವಂತೆ ವಸತಿಗೃಹಗಳನ್ನು ನಿರ್ಮಿಸಿಕೊಡುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಮಾತನಾಡಿದರು.
ಗಂಡಸಿ ಪೊಲೀಸ್ ಠಾಣೆಯ ಹಳೆಯ ಕಟ್ಟಡ ನೆಲಸಮಗೊಳಿಸಲು ಕಳೆದ ಏಪ್ರಿಲ್ ೯ ರಂದು ಅನುಮತಿ ನೀಡಲಾಗಿದೆ. ಜಾಗತಿಕ ಟೆಂಡರ್ ಕರೆಯಲಾಗಿತ್ತು, ಬಿಡ್ ಅರ್ಜಿಗಳು ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಮ್ಯಾನುಯಲ್ ಟೆಂಡರ್ ಕರೆಯಲಾಗಿದೆ. ಈ ತಿಂಗಳ ಅಂತ್ಯದಲ್ಲಿ ಗಂಡಸಿ ಪೊಲೀಸ್ ಠಾಣೆ ಕಟ್ಟಡ ನೆಲಸಮಗೊಳಿಸಲಾಗುವುದು. ರಾಜ್ಯದಲ್ಲಿ ಈ ಹಿಂದೆ ಪ್ರತಿ ವರ್ಷ ೪-೫ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು. ಈಗ ಪ್ರತಿ ಆರ್ಥಿಕ ವರ್ಷದಲ್ಲಿ ನೂರು ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ಉತ್ತಮ ವಸತಿ ಹಾಗೂ ಕರ್ತವ್ಯ ನಿರ್ವಸುವ ಠಾಣೆಗಳನ್ನು ಉತ್ತಮ ರೀತಿಯಲ್ಲಿ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಈ ವಿಷಯದಲ್ಲಿ ತಮಗೂ ಸಹಮತವಿದೆ, ಪೊಲೀಸ್ ಗೃಹ ನಿರ್ಮಾಣ ನಿಗಮ ರೂಪಿಸುವ ವಸತಿಗೃಹಗಳ ವಿನ್ಯಾಸ ಪರಿಷ್ಕರಣೆಯಾಗಬೇಕು. ಕಿರಿದಾದ ಇಕ್ಕಟ್ಟಾದ ಕೊಠಡಿಗಳಲ್ಲಿ ಜೀವನ ನಿರ್ವಹಣೆ ಸುಗಮವಾಗಿರುವುದಿಲ್ಲ. ವ್ಯಕ್ತಿ ಸ್ವತಃ ಅನುಕೂಲಕರ ಪರಿಸ್ಥಿತಿಯಲ್ಲಿ ಇಲ್ಲದಿದ್ದರೆ, ಇತರರೊಂದಿಗೆ ಉತ್ತಮವಾಗಿ ವರ್ತಿಸಲು ಸಾಧ್ಯವಾಗುವುದಿಲ್ಲವೆಂಬ ಅರ್ಥವುಳ್ಳ ಆಂಗ್ಲ ಗಾದೆಯನ್ನು ಉದಾಹರಿಸಿ, ಪೊಲೀಸ್ ಸಿಬ್ಬಂದಿಯ ವಸತಿ ಗೃಹಗಳ ಸುಧಾರಣೆಗೆ ಒತ್ತಾಯಿಸಿದರು.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಿಎಸ್‌ಆರ್ ನಿಧಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹುಬ್ಬಳ್ಳಿ ಧಾರವಾಡ (ಪೂರ್ವ)ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಪೊಲೀಸ್ ಠಾಣೆ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಹಣ ನೀಡಿದರೆ, ಅದನ್ನು ಬಳಸಿಕೊಳ್ಳಲು ಅವಕಾಶವಿಲ್ಲ ಎಂದು ಉತ್ತರ ಬಂದಿದೆ ಎಂದು ಸದನಕ್ಕೆ ತಿಳಿಸಿದರು.
ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಠಾಣೆ ಹಾಗೂ ವಸತಿಗೃಹಗಳ ನಿರ್ಮಾಣಕ್ಕೆ ಸಿಎಸ್‌ಆರ್ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಸಲು ಅವಕಾಶವಿದೆ, ಈ ಕುರಿತು ಸ್ಪಷ್ಟ ಸೂಚನೆ ನೀಡಲಾಗುವುದು ಎಂದರು.
***
ಪುತ್ತೂರಿಗೆ ದ.ಕ.ಜಿಲ್ಲಾ ಪೊಲೀಸ್ ಕಚೇರಿ ಸ್ಥಳಾಂತರ ಪರಿಶೀಲನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಘಟಕವನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಕುರಿತು ಪರಿಶೀಲನೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ್ ಮಠಂದೂರ್ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಕಾಯ್ದಿರಿಸಲಾಗಿದೆ. ಕಚೇರಿ ಸ್ಥಳಾಂತರ ಪ್ರಕ್ರಿಯೆ ಸರ್ಕಾರದ ಯಾವ ಹಂತದಲ್ಲಿದೆ ಎಂದು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಮಂಗಳೂರಿನಲ್ಲಿ ಈಗಾಗಲೇ ನಗರ ಪೊಲೀಸ್ ಆಯುಕ್ತರ ಕಚೇರಿ ಇದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯ ವ್ಯಾಪ್ತಿ ಬಹುತೇಕ ಪುತ್ತೂರು ಭಾಗದಲ್ಲಿದೆ. ಕಚೇರಿಯನ್ನು ಸ್ಥಳಾಂತರಿಸುವ ಕುರಿತು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುವುದು ಎಂದರು.
ಚರ್ಚೆಗೆ ಮಧ್ಯಪ್ರವೇಶಿಸಿದ ಕುಡಚಿ ಶಾಸಕ ಪಿ.ರಾಜೀವ ಅವರು, ಕಾರ್ಯ ವ್ಯಾಪ್ತಿಯ ಪ್ರದೇಶವು ಕೇಂದ್ರ ಸ್ಥಾನದಿಂದ ನೂರು ಕಿ.ಮೀ.ಅಂತರದಲ್ಲಿದೆ ಎನ್ನುವುದಾದರೆ, ಪ್ರತಿನಿತ್ಯ ಅಧಿಕಾರಿಗಳು, ಸಿಬ್ಬಂದಿ ಓಡಾಟಕ್ಕೆ ಅನಗತ್ಯವಾಗಿ ಇಂಧನ, ಸಮಯ ವ್ಯರ್ಥವಾಗುತ್ತದೆ. ಈ ಖರ್ಚಿಗೆ ಕಡಿವಾಣ ಹಾಕಲು ಪುತ್ತೂರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿಗಳನ್ನು ಸ್ಥಳಾಂತರ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆಗಳನ್ನು ಜಿಲ್ಲಾವಾರು ನಡೆಸುವ ಯೋಜನೆ ಸರ್ಕಾರದ ಮುಂದಿದೆಯೇ, ದ.ಕ.ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮಗೊಂಡಿರುವ ಕ್ರಮಗಳ ಕುರಿತು ಶಾಸಕ ಸಂಜೀವ ಮಠಂದೂರ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಅರಗ ಜ್ಞಾನೇಂದ್ರ ಅವರು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿನ ರಿಕ್ತವಾಗುವ ಪಿಎಸ್‌ಐ ಹುದ್ದೆಗಳಿಗೆ ವಲಯವಾರು, ಆಯುಕ್ತಾಲಯವಾರು, ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಜಿಲ್ಲಾವಾರು ಅಧಿಸೂಚನೆಗಳನ್ನು ಹೊರಡಿಸಿ, ರಾಜ್ಯ ವ್ಯಾಪ್ತಿ ಅರ್ಜಿ ಆಹ್ವಾನಿಸಿ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರಾವಳಿ ಜಿಲ್ಲೆಗಳ ಅಭ್ಯರ್ಥಿಗಳು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಹೆಚ್ಚು ಪ್ರಮಾಣದಲ್ಲಿ ಅರ್ಜಿ ಹಾಕುತ್ತಿಲ್ಲ ಶಾಸಕರು, ಜನಪ್ರತಿನಿಧಿಗಳು ಸ್ಥಳೀಯ ಅಭ್ಯಥಿಗಳನ್ನು ಅರ್ಜಿ ಹಾಕಲು ಪ್ರೋತ್ಸಾಹಿಸಬೇಕು. ಸದ್ಯ ಬಹುತೇಕ ಕಲಬುರಗಿ, ರಾಯಚೂರು ಭಾಗದ ಅಭ್ಯರ್ಥಿಗಳೇ ಕರಾವಳಿ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಅವರು ಏಳು ವರ್ಷಗಳ ನಂತರ ತಮ್ಮ ಜಿಲ್ಲೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಿರುವದರಿಂದ ಹುದ್ದೆಗಳು ಖಾಲಿ ಉಳಿಯುತ್ತಿವೆ ಎಂದರು.
****
ಕಲಘಟಗಿ ಅತಿವೃಷ್ಟಿಯಿಂದ ಹಾನಿಗೀಡಾದ ಕೆರೆ, ಚೆಕ್ ಡ್ಯಾಮ್, ಬಾಂದಾರಗಳ ಪುನಶ್ಚೇತನಕ್ಕೆ ಆದ್ಯತೆ – ಸಚಿವ ಜೆ.ಸಿ. ಮಾಧುಸ್ವಾಮಿ

ಕಳೆದ ಜೂನ್-ಜುಲೈ ಮತ್ತು ನವೆಂಬರ್ ತಿಂಗಳುಗಳಲ್ಲಿ ಸುರಿದ ಭಾರಿ ಮಳೆಗೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೩೫ ಕೆರೆಗಳು, ೩೮ ಚೆಕ್ ಡ್ಯಾಮ್, ಬಾಂದಾರಗಳು ಹಾಗೂ ೨ ಏತ ನೀರಾವರಿ ಯೋಜನೆಗಳ ನಿರ್ಮಿತಿಗಳು ಹಾನಿಗೀಡಾಗಿವೆ. ಅವುಗಳ ಪುನರುಜ್ಜೀವನಗೊಳಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಆದ್ಯತೆ ಮೇಲೆ ಅನುದಾನ ಒದಗಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಇಂದು ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣನವರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು.
ಧಾರವಾಡ ತಾಲೂಕಿನಲ್ಲಿ ೦೮, ಅಳ್ನಾವರ ತಾಲೂಕಿನಲ್ಲಿ ೫ ಹಾಗೂ ಕಲಘಟಗಿ ತಾಲೂಕಿನಲ್ಲಿ ೨೨ ಕೆರೆಗಳು ಸೇರಿ ಧಾರವಾಡ ಜಿಲ್ಲೆಯ ೩೫ ಕೆರೆಗಳು ಹಾನಿಗೊಳಗಾಗಿದ್ದು, ೨೧.೭೫ ಕೋಟಿ ರೂ.ಗಳ ನಷ್ಟವಾಗಿದೆ. ೩೮ ಆಣೆಕಟ್ಟು, ಬಾಂದಾರ ಹಾಗೂ ಚೆಕ್ ಡ್ಯಾಮ್‌ಗಳು ಹಾನಿಯಾಗಿ ೧೧.೦೩ ಕೋಟಿ ರೂ. ನಷ್ಟವಾಗಿದೆ. ೨ ಏತ ನೀರಾವರಿ ಯೋಜನೆಗಳು ಹಾನಿಯಾಗಿ ೨ ಕೋಟಿ ರೂ. ನಷ್ಟವಾಗಿದೆ. ಪುನರುಜ್ಜೀವನಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಅನುದಾನದ ಲಭ್ಯತೆಯ ಅನುಸಾರ ಆದ್ಯತೆ ನೀಡಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
***
ಸುಪ್ರೀಂ ಒಪ್ಪಿಗೆ ಪಡೆದು ೨೫ ಸಾವಿರ ಕೋಟಿ ರೂ.ಗಳ ಮೊತ್ತದಲ್ಲಿ ಗಣ ಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ: ಸಚಿವ ಆಚಾರ ಹಾಲಪ್ಪ

ಗಣ ಗಾರಿಕೆಯಿಂದ ಬಾಧಿತವಾಗಿರುವ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ೨೫ ಸಾವಿರ ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗಿದ್ದು, ಸುಪ್ರೀಂಕೋರ್ಟ್‌ನ ಅನುಮೋದನೆ ಪಡೆದುಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಗಣ ಮತ್ತು ಭೂವಿಜ್ಞಾನ ಖಾತೆ ಸಚಿವ ಆಚಾರ ಹಾಲಪ್ಪ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಪಿ.ಆರ್.ರಮೇಶ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಸುಪ್ರೀಂಕೋರ್ಟ್ ಆದೇಶದ ಅನ್ವಯ ಬಳ್ಳಾರಿ,ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣ ಗಾರಿಕೆಯಿಂದ ಬಾಧಿತವಾದ ಪ್ರದೇಶಗಳ ಸಮಗ್ರ ಪರಿಸರ ಅಭಿವೃದ್ಧಿ,ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಮತ್ತು ಗಣ ಗಾರಿಕೆಗೆ ಅವಶ್ಯಕವಾಗಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಳ್ಳಲು ಉದ್ದೇಶಿಸಿರುವ ಅಭಿವೃದ್ಧಿ ಚಟುವಟಿಕೆಗಳನ್ನು ಜಿಲ್ಲಾಡಳಿತ ಗುರುತಿಸಿ ಸರಕಾರದ ಮಟ್ಟದಲ್ಲಿ ಕ್ರೋಢೀಕರಿಸಿ ೨೪,೯೯೬.೭೧ಕೋಟಿ ರೂ.ಗಳ ಮೊತ್ತದ ಕ್ರಿಯಾಯೋಜನೆ ತಯಾರಿಸಿ ೨೦೧೮ರಲ್ಲಿ ಸುಪ್ರೀಂಕೋರ್ಟ್ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಯೋಜನೆಗೆ ಶೀಘ್ರ ನ್ಯಾಯಾಲಯದ ಅನುಮೋದನೆ ಪಡೆಯುವ ಸಂಬಂಧ ೩ ಬಾರಿ ಹಿರಿಯ ವಕೀಲರು ಮತ್ತು ೦೭ ಬಾರಿ ಸಾಲಿಸಿಟರ್ ಜನರಲ್ ಅವರು ನ್ಯಾಯಾಲಯದ ಮುಂದೆ ಅರಿಕೆ ಮಾಡಿದ್ದಾರೆ. ಕೇಸು ಶೀಘ್ರ ಕೈಗೆತ್ತಿಕೊಳ್ಳುವಂತೆ ಕೋರಿ೦೭ ಮೆನ್ಷನಿಂಣ್ ಅಪ್ಲಿಕೇಶನ್‌ಗಳನ್ನು ಸಲ್ಲಿಸಲಾಗಿದೆ. ನ್ಯಾಯಾಲಯದ ಅನುಮೋದನೆ ನಿರೀಕ್ಷಿಸಲಾಗುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.
ಈ ಯೋಜನೆಗೆ ಸುಪ್ರೀಂ ಅನುಮೋದನೆ ದೊರೆಯಬೇಕಾಗಿರುವುದರಿಂದ ಕರ್ನಾಟಕ ಗಣ ಪರಿಸರ ಪುನಶ್ಚೇತನ ನಿಗಮದಡಿಯಲ್ಲಿ ಈವರೆಗೆ ಯಾವುದೇ ಕಾಮಗಾರಿ/ಯೋಜನೆಗಳನ್ನು ಕೈಗೊಂಡಿರುವುದಿಲ್ಲ. ಅನುಮೋದನೆ ದೊರೆತ ನಚಿತರ ಸುಪ್ರೀಂ ಆದೇಶದಂತೆ ಯೋಜನೆಯ ಅನುಷ್ಠಾನ ಕಾರ್ಯ ಕೈಗೊಳ್ಳಲಾಗುವುದು ಎಂದರು.
ಕಳೆದ ೦೫ ವರ್ಷಗಳಿಂದ ರಾಜ್ಯದ ಗಣ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಅಕ್ರಮಗಣ ಗಾರಿಕೆ ಮತ್ತು ಇತರೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡವಸೂಲಿ ಮಾಡಲಾಗಿದೆ ಮತ್ತು ಗಣ ಗಾರಿಕೆ,ದಾಸ್ತಾನು ಮತ್ತು ಸಾಗಾಣ ಕೆ ಉಲ್ಲಂಘನೆಯಡಿ ೨೦೧೭ರಿಂದ ಇಲ್ಲಿಯವರೆಗೆ ೧೯ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹೊಸ ಮರಳು ನೀತಿ ೨೦೨೦ರನ್ವಯ ಮರಳು ಗಣ ಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕರ್ನಾಟಕ ಉಪಖನಿಜ ರಿಯಾಯ್ತಿ(ತಿದ್ದುಪಡಿ) ನಿಯಮಗಳು ೨೦೨೧ನ್ನು ಜಾರಿಗೊಳಿಸಲಾಗಿದೆ ಎಂದು ಸದಸ್ಯೆ ಎಸ್.ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದರು.
ಕೊಡಗು ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗಳಿಗೆ ಬೇಡಿಕೆಗನುಗುಣವಾಗಿ ಮರಳು ಪೂರೈಸಲಾಗುತ್ತಿದೆ ಎಂದು ವಿವರಿಸಿದ ಅವರು ಕೊಡಗು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಹಾಗೂ ಸರಕಾರಿ ನಿರ್ಮಾಣ ಕಾಮಗಾರಿಗಳಿಗೆ ಮರಳು ಕೊರತೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
*ಬೇಡಿಕೆಗೆ ತಕ್ಕಂತೆ ಮರಳು ಪೂರೈಸಲು ಹೊಸ ಮರಳು ನೀತಿ: ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗಳಿಗೆ ಬೇಡಿಕೆಗೆ ತಕ್ಕಂತೆ ನಿಗದಿತ ದರದಲ್ಲಿ ಮರಳು ಪೂರೈಕೆ ಮಾಡಲು ೨೦೨೦ ಮೇ ೦೫ ರಂದು ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಗಣ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಆಚಾರ ಹಾಲಪ್ಪ ಅವರು ಪರಿಷತ್‌ನಲ್ಲಿ ತಿಳಿಸಿದ್ದಾರೆ.
ಮಹಾಂತೇಶ ಕವಟಗಿಮಠ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಅವರು ಗ್ರಾಪಂಗಳ ಮೂಲಕ ವಿಲೇವಾರಿ ಮಾಡುವ ಪ್ರತಿ ಮೆಟ್ರಿಕ್ ಟನ್ ಮರಳಿಗೆ ರೂ.೩೦೦ ಹಾಗೂ ಕೆಎಸ್‌ಎಂಸಿಎಲ್ ಮತ್ತು ಹಟ್ಟಿ ಚಿನ್ನದ ಗಣ ಕಂಪನಿ ಮೂಲಕ ವಿಲೇವಾರಿ ಮಾಡುವ ಪ್ರತಿ ಮೆಟ್ರಿಕ್ ಟನ್‌ಗೆ ೭೦೦ ರೂ.ನಿಗದಿಪಡಿಸಲಾಗಿದೆ ಎಂದರು.
ನಿಯಮಾನುಸಾರ ಮರಳು ಸಾಗಾಣ ಕೆಗೆ ಪರವಾನಿಗೆ ಪಡೆದು ಮರಳು ದಾಸ್ತಾನು ಪಡೆದು ಮರಳು ದಾಸ್ತಾನು ಮಾಡಿ ಸ್ವಂತ ಮನೆ ಕಟ್ಟಿಕೊಳ್ಳುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇಲಾಖಾ ಅಧಿಕಾರಿಗಳು ತೊಂದರೆ ನೀಡುತ್ತಿರುವ ಬಗ್ಗೆ ಯಾವುದೇ ದೂರುಗಳು ಸ್ವೀಕೃತವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
****
ಅಂಗನವಾಡಿಗಳಲ್ಲಿನ ಆಹಾರ ಅಕ್ರಮ ಸಾಗಾಣಿಕೆ ತಡೆಗೆ ಕಠಿಣ ನಿಯಮಾವಳಿಗಳ ಜಾರಿ: ಸಚಿವ ಆಚಾರ ಹಾಲಪ್ಪ

ಅಂಗನವಾಡಿಗಳಲ್ಲಿ ಆಹಾರ ಅಕ್ರಮ ಸಾಗಾಣ ಕೆಯನ್ನು ತಡೆಗಟ್ಟಲು ಹೆಚ್ಚು ಕಠಿಣ ನಿಯಮಾವಳಿಗಳನ್ನು ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಆಚಾರ ಹಾಲಪ್ಪ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಎಂ.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಅವರು ಈಗಾಗಲೇ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸಾಮಾಗ್ರಿಗಳು ಸರಬರಾಜಾದ ನಚಿತರ ಬಾಲವಿಕಾಸ ಸಮಿತಿ, ಇಲಾಖೆಯ ಮೇಲ್ವಿಚಾರಕಿಯರು,ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು,ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬಾಲವಿಕಾಸ ಸಮಿತಿ ಸದಸ್ಯರು ಪೂರಕ ಪೌಷ್ಠಿಕ ಆಹಾರ ತಲುಪಿರುವ ಬಗ್ಗೆ ಮನೆಗಳಿಗೆ ಭೇಟಿ ನೀಡಿ ಖಚಿತಪಡಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದ ಅವರು ಈ ರೀತಿಯ ಅಕ್ರಮಗಳು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಹೇಳಿದರು ಮತ್ತು ಈಗಿರುವ ನಿಯಮಗಳ ಜೊತೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು.
*ಅಂಗವಿಕಲರ ಕಲ್ಯಾಣಕ್ಕೆ ಹೆಚ್ಚಿನ ಅನುದಾನದ ಭರವಸೆ: ರಾಜ್ಯದಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ೧೦೭ ಯೋಜನೆಗಳು ಜಾರಿಯಲ್ಲಿವೆ;ಆದರೇ ಅನುದಾನ ಕಡಿಮೆ ಎಂಬ ಸದಸ್ಯ ನಿರಾಣ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಸಮ್ಮತಿ ವ್ಯಕ್ತಪಡಿಸಿದ ಸಚಿವ ಆಚಾರ ಹಾಲಪ್ಪ ಅವರು ಬರುವ ಬಜೆಟ್‌ನಲ್ಲಿ ಅಂಗವಿಕಲರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ಒದಗಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
***
ನಿಗದಿಪಡಿಸಿದ ಅವಧಿಯೊಳಗೆ ಉದ್ದಿಮೆ ಸ್ಥಾಪಿಸದಿದ್ದಲ್ಲಿ ನಿವೇಶನ ವಾಪಸ್: ಸಚಿವ ನಿರಾಣಿ

ಕೈಗಾರಿಕಾ ಪ್ರದೇಶಗಳಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವುದಾಗಿ ಹೇಳಿ ನಿವೇಶನ ಪಡೆದುಕೊಂಡು ನಿಗದಿಪಡಿಸಿದ ಅವಧಿಯೊಳಗೆ ಯೋಜನೆ ಅನುಷ್ಠಾನಗೊಳಿಸದೇ ಇರುವವರ ನಿವೇಶನಗಳನ್ನು ಮೂರ‍್ನಾಲ್ಕು ತಿಂಗಳಲ್ಲಿ ರದ್ದುಪಡಿಸಿ ಗಂಭೀರವಾಗಿ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳುವವರಿಗೆ ನೀಡಲು ಕ್ರಮವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯರಾದ ಮೋಹನಕುಮಾರ್ ಕೊಂಡಜ್ಜಿ ಹಾಗೂ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ೫೦೦ ಎಕರೆಗಿಂತಲೂ ಜಾಸ್ತಿ ಪ್ರದೇಶದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವುದಾಗಿ ಹೇಳಿ ನಿವೇಶನ ಪಡೆದುಕೊಂಡು ಅನೇಕ ವರ್ಷಗಳಾದರೂ ಇನ್ನೂ ಕೂಡ ಉದ್ದಿಮೆಗಳನ್ನು ಸ್ಥಾಪಿಸಿಲ್ಲ;ಅಂತವರಿಗೆ ನೋಟಿಸ್ ಜಾರಿ ಮಾಡಿ ರದ್ದುಪಡಿಸಿ ಬೆರೆಯವರಿಗೆ ವಹಿಸಲು ಕ್ರಮವಹಿಸಲಾಗುವುದು ಎಂದರು.
ಉದ್ದಿಮಿಯಾಗು ಉದ್ಯೋಗ ನೀಡು ಜಾಗೃತಿ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ: ಕೈಗಾರಿಕಾ ಮತ್ತು ವಾಣ ಜ್ಯ ಇಲಾಖೆ ವತಿಯಿಂದ ಉದ್ಯಮಿಯಾಗು ಉದ್ದಿಮೆ ನೀಡು ಎನ್ನುವ ಜಾಗೃತಿ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಿ ನಿರುದ್ಯೋಗಿ ಪದವೀಧರರಿಗೆ ಸ್ವಯಂ ಉದ್ಯೋಗ ಪ್ರಾರಂಭಿಸುವುದಕ್ಕೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಚಿವ ಮುರುಗೇಶ ನಿರಾಣ ಅವರು ಸದಸ್ಯ ಎಸ್.ವಿ.ಸಂಕನೂರು ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಕಲಬುರಗಿ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿತ್ತು;ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಜನೆವರಿಗೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.
ನಿರುದ್ಯೋಗಿ ಪದವೀಧರರು ಕೈಗಾರಿಕೆಗಳನ್ನು ಸ್ಥಾಪಿಸಲು ಸೀಡ್ ಮನಿ ಮತ್ತು ಸಬ್ಸಿಡಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒದಗಿಸಲಾಗುತ್ತಿದೆ; ಸಾಮಾನ್ಯ ವರ್ಗಕ್ಕೂ ಸಹ ಶೇ.೧೦ರಷ್ಟು ಮೀಸಲಿರಿಸಿ ಅವರಿಗೂ ಸೀಡ್ ಮನಿ ಅಡಿ ಸಬ್ಸಿಡಿ ನೀಡಲು ಪ್ರಸ್ತಾವ ಸಿದ್ದಪಡಿಸಲಾಗಿದ್ದು,ಆರ್ಥಿಕ ಇಲಾಖೆಯಲ್ಲಿ ಕಡತವಿದೆ;ಶೀಘ್ರ ಇದು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.
***
ಖಾಸಗಿ ವಿದ್ಯುತ್ ಉತ್ಪಾದನೆಗೆ ಸಹಾಯ ಸರಕಾರದ ಉದ್ದೇಶವಿಲ್ಲ: ಸಚಿವ ಭೈರತಿ ಬಸವರಾಜ

ಉಡುಪಿ ನಗರಕ್ಕೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಯೋಜನೆಯ ಜಾರಿಗೆ ತರುವುದ ಮೂಲಕ ಖಾಸಗಿ ವಿದ್ಯುತ್ ಉತ್ಪಾದನೆಗೆ ಸಹಾಯ ಮಾಡುವಂತ ಉದ್ದೇಶ ಸರಕಾರದ್ದಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಕೆ.ಪ್ರತಾಪಚಂದ್ರಶೆಟ್ಟಿ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಉಡುಪಿ ನಗರಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದ ಚೋರಾಡಿ ಸಮೀಪದ ವಾರಾಹಿ ಎಡದಂಡೆ ಮುಖ್ಯ ನಾಲೆಯ ೧೨.೯೫೦ ಕಿ.ಮೀನ ಎಡಭಾಗದಲ್ಲಿ ಹೆಚ್ಚುವರಿಯಾಗಿ ಔಟ್‌ಲೆಟ್ ನಿರ್ಮಿಸಿ ನಾಲೆಯಿಂದಲೇ ನೀರನ್ನು ಸರಬರಾಜು ಮಾಡಲಾಗುವುದು.ಇದರಿಂದ ಉಡುಪಿ ನಗರಸಭೆಗೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ. ನಾಲೆಯಲ್ಲಿ ನೀರು ಲಭ್ಯವಿರುವಾಗ ನಾಲೆಯಿಂದಲೇ ನೀರನ್ನು ಬಳಸಲಾಗುವುದು ಮತ್ತು ನಾಲೆಯಲ್ಲಿ ನೀರು ಲಭ್ಯವಿಲ್ಲದ ಸಂದರ್ಭದಲ್ಲಿ ನದಿಯಿಂದ ನೀರನ್ನು ಬಳಸಲಾಗುವುದು ಎಂದರು.
ನಾಲೆಯಿಂದ ನೀರನ್ನು ಹಾಲಾಡಿಯಲ್ಲಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕಕ್ಕೆ ಹರಿಸಿ ಅಲ್ಲಿ ನೀರು ಶುದ್ಧೀಕರಣವಾದ ಬಳಿಕ ಮಾರ್ಗದಲ್ಲಿನ ೨೩ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಿ ನೇರವಾಗಿ ಮಣ ಪಾಲದ ಜಿಎಲ್‌ಎಸ್‌ಆರ್‌ಗೆ ಹರಿಸಲಾಗುವುದು ಎಂದರು.
***
ಮೈಸೂರು ಲ್ಯಾಂಪ್ಸ್ ಪ್ರದೇಶ ಅಭಿವೃದ್ಧಿಗೆ ಟ್ರಸ್ಟ್ ರಚನೆ: ಸಚಿವ ನಿರಾಣಿ

ಬೆಂಗಳೂರಿನ ಯಶ್ವಂತಪುರ ಬಳಿಯಿರುವ ಮೈಸೂರು ಲ್ಯಾಂಪ್ಸ್‌ನ ೨೨ ಎಕರೆ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ೭ಜನ ಹಿರಿಯ ಐಎಎಸ್ ಅಧಿಕಾರಿಗಳ ಟ್ರಸ್ಟ್ ರಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಕಾಂತರಾಜು ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರದೇಶದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಸರಕಾರ ಟ್ರಸ್ಟ್ ರಚಿಸಲಾಗಿದೆ ಹೊರತು ಈ ಜಾಗವನ್ನು ಹಸ್ತಾಂತರ ಮಾಡುವ ಮತ್ತು ಮಾರಾಟ ಮಾಡುವ ಉದ್ದೇಶ ನಮ್ಮ ಸರಕಾರದ್ದಲ್ಲ ಎಂದರು. ಟ್ರಸ್ಟ್ ಇದ್ದರೂ ಕೂಡ ಹೆಸರು ಸೇರಿದಂತೆ ಎಲ್ಲವೂಗಳು ಮೈಸೂರು ಲ್ಯಾಂಪ್ಸ್ ಹೆಸರಿನಲ್ಲಿಯೇ ಇರಲಿವೆ ಎಂದು ಸದಸ್ಯ ಕಾಂತರಾಜು ಅವರ ಆತಂಕವನ್ನು ತಮ್ಮ ಮಾತುಗಳ ಮೂಲಕ ಬಗೆಹರಿಸಿದರು.
***
ಸ್ಮಾರ್ಟ್ ಸಿಟಿಗಳ ಕಾಮಗಾರಿಗಳ ನಿರ್ವಹಣೆ ಪಾಲಿಕೆಗೆ: ಸಚಿವ ಭೈರತಿ ಬಸವರಾಜ

ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಆಯ್ಕೆಯಾದ ನಗರಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿಗಳ ಮುಕ್ತಾಯದ ನಂತರ ಅವುಗಳ ನಿರ್ವಹಣೆಯನ್ನು ಮಹಾನಗರ ಪಾಲಿಕೆಗಳಿಗೆ ವಹಿಸಲು ಚಿಂತನೆ ನಡೆದಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ತಿಪ್ಪೇಸ್ವಾಮಿ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಎಲ್ಲ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಮತ್ತು ನಿಗದಿತ ಅವಧಿಯೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬೆಳಗಾವಿ ನಗರದಲ್ಲಿ ಶೇ.೭೩ರಷ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ವಿಧಾನ ಪರಿಷತ್ ಚುನಾವಣೆ: ರಾಜ್ಯದ ಸಮಗ್ರ ಫಲಿತಾಂಶ, ಗಣ್ಯರ ಪ್ರತಿಕ್ರಿಯೆ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button