ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣರಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಈಗ ತಾನೆ ವಾರಾಣಸಿಯಿಂದ ಬಂದಿದ್ದೇನೆ. ಪಕ್ಷದ ಎಲ್ಲರೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಪಕ್ಷದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದೂ ಹೇಳಿದರು.
ರಾಜ್ಯದಲ್ಲಿ ಬಿಜೆಪಿಗೆ 6 ಸ್ಥಾನವಿತ್ತು, ಈಗ 12ಕ್ಕೇರಿದೆ. ಹಾಗಾಗಿ ನಮಗೆ ಫಲಿತಾಂಶ ನೆಮ್ಮದಿ ತಂದಿದೆ ಎಂದೂ ತಿಳಿಸಿದರು.
ಲಖನ್, ಕವಟಗಿಮಠ ಮತಗಳ ಅಂತರ 90, ಅಸಿಂಧುವಾದ ಮತ 152!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ