ಪ್ರಗತಿವಾಹಿನಿ ಸುದ್ದಿ; ಹಾವೇರಿ: ಎಂಎಲ್ ಸಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಧಾರವಾಡ ದ್ವಿಸದಸ್ಯ ಸ್ಥಾನದ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.
ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ ಮಲ್ಲಿಕಾರ್ಜುನ ಹಾವೇರಿಯನ್ನು ಉಚ್ಛಾಟಿಸಿದ್ದಾರೆ.
ಸಿ.ಟಿ.ರವಿಯಲ್ಲ ಆತ ಲೂಟಿ ರವಿ; ಡಿಕೆಶಿ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ