ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಂಗಳೂರಿನಲ್ಲಿ ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ರಚನೆ, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕ ಸೇರಿ ಒಟ್ಟು ಮೂರು ವಿಧೇಯಕಗಳನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಪ್ರಶ್ನೋತ್ತರ ವೇಳೆಯ ನಂತರ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆಗೆ ವಿಧೇಯಕಗಳನ್ನು ಮಂಡಿಸಲು ಆಹ್ವಾನಿಸಿದರು. ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜನ್ನು(ಯುವಿಸಿಇ),ವಿಶ್ವೇಶ್ವರಯ್ಯ ಇಂಜಿನಿಯರಿAಗ್ ಕಾಲೇಜು ವಿಶ್ವವಿದ್ಯಾಲಯ(ಯುವಿಸಿಸಿ)ವನ್ನಾಗಿ ಘೋಷಿಸಿ,ರಚಿಸುವ ವಿಧೇಯಕ ಮಂಡಿಸಿದರು. ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ ದೊರೆಯಿತು.
ಎಸ್.ವಿ.ರಂಗನಾಥ್ ಸಮಿತಿ ವರದಿ ಆಧರಿಸಿ,ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿAಗ್ ಕಾಲೇಜನ್ನು ಪುಣೆಯ ಕಾಲೇಜ ಆಫ್ ಇಂಜಿನಿಯರಿAಗ್ (ಸಿಓಇಪಿ) ಹಾಗೂ ಐಐಟಿ ಮಾದರಿಯಲ್ಲಿ ರಾಷ್ಟ್ರೀಯ ಮಹತ್ವದ ಸಂಸ್ಥೆಗಳ ದರ್ಜೆಯಲ್ಲಿ ರೂಪಿಸಲು ಈ ವಿಧೇಯಕ ರೂಪಿಸಲಾಗಿದೆ.
ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ ಅವರು, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ವಿಧೇಯಕ ಮಂಡಿಸಿ,ಸದನದ ಅಂಗೀಕಾರ ಪಡೆದರು.
ಸಾರ್ವಜನಿಕ ಆರೋಗ್ಯ ಆಯುಷ್ ಉದ್ಯಮ, ವೈದ್ಯಕೀಯ ಸಸ್ಯ ಸಂಪನ್ಮೂಲ ಅಭಿವೃದ್ಧಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ, ಸೋವರಿಗ್ಪ ಮತ್ತು ಹೋಮಿಯೋಪತಿ ವೈದ್ಯ ಪದ್ಧತಿಗಳಲ್ಲಿ ಉತ್ಕೃಷ್ಟ ವಿಶ್ವವಿದ್ಯಾಲಯ ಸ್ಥಾಪಿಸುವ ಈ ವಿಧೇಯಕ ರೂಪಿಸಲಾಗಿದೆ.
ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಸದನದ ಅಂಗೀಕಾರ ಪಡೆದರು.
ಪರಿಷತ್ ಚುನಾವಣೆ ಬಂಡಾಯ: ಬಿಜೆಪಿಯಿಂದ ಉಚ್ಛಾಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ