ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು ಎಂದರು.
ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ