Kannada NewsKarnataka NewsLatest
ಬೆಳಗಾವಿಯಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ : ಧರ್ಮವೀರ್ ಸಂಭಾಜಿ ವೃತ್ತದಲ್ಲಿ ಬೃಹತ್ ಜನಸ್ತೋಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಧರ್ಮವೀರ್ ಸಂಭಾಜಿ ವೃತ್ತ (ಬೋಗಾರ್ವೇಸ್) ಬಳಿ ಶುಕ್ರವಾರ ರಾತ್ರಿ ಏಕಾಏಕಿ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಲಾಗಿದೆ ಎನ್ನುವ ವಿಡೀಯೋವೊಂದು ವೈರಲ್ ಆಗುತ್ತಿದ್ದಂತೆ ಏಕಾ ಏಕಿ ರಾತ್ರಿ ಜಮಾಯಿಸಿದ ಜನರು ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಜನ ಸೇರುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.
ಸುಪ್ರಿಂ ಕೋರ್ಟನ ಸಂವಿಧಾನಿಕ ಪೀಠ ವಲಯವಾರು ಸ್ಥಾಪನೆ; ವಿವರಣೆ ನೀಡಿದ ಕೇಂದ್ರ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ