ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು; 27 ಜನರ ಬಂಧನ: ನಿಷೇಧಾಜ್ಞೆ ಜಾರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈವರೆಗೆ 27 ಜನರನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.
ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈವರೆಗೆ 27 ಜನರನ್ನು ಬಂಧಿಸಲಾಗಿದ್ದು, ಇನ್ನೂ ಬಂಧನ ಪ್ರಕ್ರಿಯೆ ಮುಂದುವರಿದಿದೆ.
ಬೆಳಗಾವಿ ತಾಲೂಕಿನಾದ್ಯಂತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಮಧ್ಯೆ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಮಾಡಲಾಗಿದ್ದು, ಈ ಸಂಬಂಧ ಕೂಡ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ಇಂದು ಬೆಳಗ್ಗೆ 10.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಒಟ್ಟಾರೆ ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಆನಗೋಳದಲ್ಲಿ ಮಧ್ಯರಾತ್ರಿ ರಾಯಣ್ಣ ಮೂರ್ತಿ ಭಗ್ನ ಮಾಡಿದ ದುಷ್ಕರ್ಮಿಗಳು; ಪೊಲೀಸ್ ಠಾಣೆ ಬಳಿ ಜಮಾಯಿಸಿದ ಯುವಕರು
ಬೆಳಗಾವಿಯಲ್ಲಿ ಪ್ರತಿಭಟನೆ, ಹಿಂಸಾಚಾರ: 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಾಟ: ವಾಹನಗಳ ಗಾಜು ಪುಡಿ ಪುಡಿ
ಬೆಳಗಾವಿಯಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ : ಧರ್ಮವೀರ್ ಸಂಭಾಜಿ ವೃತ್ತದಲ್ಲಿ ಬೃಹತ್ ಜನಸ್ತೋಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ