ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಆನಗೋಳದಲ್ಲಿ ತಡರಾತ್ರಿ ರಾಯಣ್ಣ ಮೂರ್ತಿ ಧ್ವಂಸಗೊಳಿಸಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ. ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯ ಇದಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇವೆ. ತಪ್ಪು ಮಾಡಿದವರಿಗೆ ಈ ಬಾರಿ ಭಯ ಹುಟ್ಟಿಸುತ್ತೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮ ಕಾದು ನೋಡಿ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು; 27 ಜನರ ಬಂಧನ: ನಿಷೇಧಾಜ್ಞೆ ಜಾರಿ
ಆನಗೋಳದಲ್ಲಿ ಮಧ್ಯರಾತ್ರಿ ರಾಯಣ್ಣ ಮೂರ್ತಿ ಭಗ್ನ ಮಾಡಿದ ದುಷ್ಕರ್ಮಿಗಳು; ಪೊಲೀಸ್ ಠಾಣೆ ಬಳಿ ಜಮಾಯಿಸಿದ ಯುವಕರು
ಬೆಳಗಾವಿಯಲ್ಲಿ ಪ್ರತಿಭಟನೆ, ಹಿಂಸಾಚಾರ: 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಾಟ: ವಾಹನಗಳ ಗಾಜು ಪುಡಿ ಪುಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ