ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಡಿಸೆಂಬರ್ 9ರಂದು ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ವಿಜ್ಞಾನಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿಜ್ಞಾನಿ ವಿಚಾರಣೆ ವೇಳೆ ತಪ್ಪೊಪ್ಪಿಕೊಡಿದ್ದು, ಕೋರ್ಟ್ ಗೆ ವಿಚಾರಣೆಗೆ ಹಾಜರಾಗಬೇಕಿದ್ದ ವಕೀಲರನ್ನು ಕೊಲ್ಲುವ ಉದ್ದೇಶಕ್ಕೆ ಟಿಫಿನ್ ಬಾಕ್ಸ್ ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ.
ಡಿಸೆಂಬರ್ 9ರಂದು ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದರು. ಕೋರ್ಟ್ ಆವರಣದಲ್ಲಿ ನಡೆದಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು.
ಮನೆ ನೋಡಲೆಂದು ಹೋಗಿ 5ನೇ ಮಹಡಿಯಿಂದ ಬಿದ್ದ ಪುಟ್ಟ ಬಾಲಕ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ