Kannada NewsKarnataka NewsLatest

ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯಗೆಡಬೇಡಿ ಎಂದು ಭರವಸೆ ನೀಡಿದ ಶಾಸಕಿ​

ಕೋವಿಡ್ ಸಂತ್ರಸ್ತ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದ ಲಕ್ಷ್ಮಿ ಹೆಬ್ಬಾಳಕರ್

 

​ ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರಿಗೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪರಿಹಾರದ ಚೆಕ್ ಗಳನ್ನು ವಿತರಿಸಿದರು.
ಸರಕಾರ ಘೋಷಿಸಿರುವಂತೆ ಒಟ್ಟೂ 19 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರದ ಚೆಕ್ ಗಳನ್ನು ವಿತರಿಸಲಾಯಿತು. ಕೊರೋನಾ ಅನಿರೀಕ್ಷಿತವಾಗಿ ಆಕ್ರಮಣ ಮಾಡಿ ನಮ್ಮೆಲ್ಲರ ಬದುಕನ್ನೇ ನಲುಗಿಸಿತು. ಅನೇಕರು ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡರು. ಯಾರಿಗೂ ಇಂತಹ ಸ್ಥಿತಿ ಬರಬಾರದು. ಅವರೆಲ್ಲರ ದುಃಖದಲ್ಲಿ ನಾನೂ ಸಹ ಭಾಗಿಯಾಗಿರುವೆ. ಯಾರೂ ಧೈರ್ಯಗೆಡಬೇಡಿ. ನಿಮ್ಮೊಂದಿಗೆ ನಾವೆಲ್ಲ ಇದ್ದೇವೆ. ಮುಂದಿನ ದಿನಗಳಲ್ಲಿ ಕುಟುಂಬದ ಮಕ್ಕಳ ಶಿಕ್ಷಣ ಸೇರಿದಂತೆ ಎಲ್ಲದಕ್ಕೂ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿ, ಲಕ್ಷ್ಮಿ ಹೆಬ್ಬಾಳಕರ್ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ​ಆರ್.ಕೆ.​ ಕುಲಕರ್ಣಿ, ಯುವರಾಜ ಕದಂ, ಬಾಗಣ್ಣ ನರೋಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button