Kannada NewsLatest

ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ

ಪ್ರಗತಿವಾಹಿನಿ ಸುದ್ದಿ; ಅಥಣಿ: ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿತ್ತು ಈ ಕುರಿತಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗಮನಕ್ಕೆ ತಂದಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಸಭೆ ಸಹ ನಡೆಸಲಾಗಿತ್ತು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು

ಕೆಲವು ಹೊಸ ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು ಸದ್ಯದಲ್ಲೇ ಅಭಿವೃದ್ಧಿ ಕೆಲಸಗಳು ಆರಂಭ ಅಗಲಿವೆ ಎಂದು ಸಚಿವರು ಹೇಳಿದ್ದಾರೆ. ಈ ಹಿಂದಿನ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು ಗುಣಮಟ್ಟದ ಕೆಲಸ ನಡೆಯಬೇಕು ಯಾವುದೇ ನೆಪ ಒಡ್ಡಿ ಕುಂಠಿತವಾದರೆ ಮತ್ತು ಗುಣಮಟ್ಟ ಇಲ್ಲದಿದ್ದರೆ ಶಿಸ್ತು ಕ್ರಮ ಕೈಗುಳುವುದಾಗಿ ಸಚಿವರು ಹೇಳಿದ್ದಾರೆ. ಮಹಾವಿದ್ಯಾಲಯದ ಅಧಿಕಾರಿಗಳು ಕಟ್ಟಡ ನಿರ್ಮಾಣ ಕಾಮಗಾರಿ ಮೇಲೆ ನಿಗಾವಹಿಸಿ ಕಳಪೆ ಕಾಮಗಾರಿ ಆಗದಂತೆ ನೋಡಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು ಕಾಮಗಾರಿಗಳು ವೇಗ ಪಡೆದುಕೊಂಡಿವೆ ಎಂದು ಅವರು ಹೇಳಿದರು. ಶ್ರೀಘ್ರವಾಗಿ ಕಟ್ಟಡ ಕಾಮಗಾರಿ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಡೆಯಿಂದ ಉದ್ಘಾಟನೆ ಮಾಡಿಸಲಾಗುವು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಆಗಿತ್ತು ನಂತರದಲ್ಲಿ ಬಂದ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರ ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು ಅಲ್ಲದೆ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿದ್ದವು ಎಂದು ಸಚಿವರು ವಿವರಿಸಿದ್ದಾರೆ.

ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.137 ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.36 ಕೋಟಿ ಅಗತ್ಯ ಕಾಮಗಾರಿಗಳಿಗೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಈ ಭಾಗದ ಅಭಿವೃದ್ಧಿಗೆ ಮತ್ತು ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ, ವಿಶ್ವವಿದ್ಯಾಲಯದ ಕುಲಪತಿ ಶ್ರೀ ಹೆಚ್.ಡಿ ನಾರಾಯಣಸ್ವಾಮಿ, ಕುಲಸಚಿವರಾದ ಶ್ರೀ ಕೆ.ಸಿ ವಿರಣ್ಣಾ, ನಿರ್ದೇಶಕರಾದ ಡಾ.ಶಿವಪ್ರಕಾಶ, ಪಶುವೈದ್ಯಕೀಯ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೆಗಾರ,ಸಚಿವರ ಆಪ್ತ ಕಾರ್ಯದರ್ಶಿ ಡಾ.ಭಾಸ್ಕರ್ ನಾಯ್ಕ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿಯಲ್ಲಿ ಪೊಲೀಸ್ ವೈಫಲ್ಯ, ಸೋಮವಾರ ಸದನದಲ್ಲಿ ಧ್ವನಿ ಎತ್ತುವೆ – ಅಭಯ ಪಾಟೀಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button