ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ನಡೆದಿದೆ. ಈ ಬಗ್ಗೆ ನಾಳೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯಲ್ಲಿ ನಡೆದ ಗಲಾಟೆ ಬಗ್ಗೆ ಈಗಾಗಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಾಳೆ ಅಧಿವೇಶನದಲ್ಲಿಯೂ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವುದು ಖಂಡನೀಯ. ಪ್ರಕರಣ ಸಂಬಂಧ 23 ಜನರನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ. ಕೃತ್ಯದಲ್ಲಿ ಯಾರೇ ಶಾಮೀಲಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆತ್ತಲೆ ವಿಡಿಯೋ ವೈರಲ್; ಬಿಜೆಪಿ ನಗರ ಘಟಕದ ಅಧ್ಯಕ್ಷನ ವಿರುದ್ಧ ಮಹಿಳೆ ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ