ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣ ಬೆನ್ನಲ್ಲೇ ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ನಡೆದಿತ್ತು. ಇದೀಗ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಣಧೀರ ಪಡೆ ಚೇತನ್ ಗಾಡ ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಎಂಇಎಸ್ ಪುಂಡರು ಕನ್ನಡ ಬಾವುಟ ಸುಟ್ಟ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳುವ ಉದ್ದೇಶಕ್ಕೆ ಕೃತ್ಯವೆಸಗಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಆರೋಪಿಗಳ ವಿಚಾರಣೆ ಮುಂದುವರೆದಿದೆ. ಈ ನಡುವೆ ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲಾ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೃತ್ಯದ ಹಿಂದೆ ಯಾರೇ ಶಾಮೀಲಾಗಿದ್ದರೂ ಕಠಿಣ ಕ್ರಮ; ಬಿಎಸ್ ವೈ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ