Kannada NewsLatest

ಎಂಇಎಸ್ ವಿರುದ್ಧ ಕನ್ನಡಿಗರ ಆಕ್ರೋಶ; ಪಿರನವಾಡಿಯಲ್ಲಿ ಕರವೇ ಬೃಹತ್ ಪ್ರತಿಭಟನೆ; ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಆನಗೋಳ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಇದೇ ವೇಳೆ ಶಿವಸೇನೆ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರ ಅಂಬೇಡ್ಕರ್ ಭವನದ ಬಳಿಯ ದೃಶ್ಯ

ಆದರೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಸದಾಶಿವನಗರದ ಅಂಬೇಡ್ಕರ್ ಭವನದಲ್ಲಿ ಕೂಡಿಟ್ಟಿದ್ದಾರೆ.

ಆನಗೋಳ ಚಲೋ ಪಾದಯಾತ್ರೆಗೆಂದು ಕನ್ನಡ ಕಾರ್ಯಕರ್ತರು ಪೀರನವಾಡಿ ತಲುಪಿ, ಪ್ರತಿಭಟನಾ ಮೆರವಣಿಗೆ ಆರಂಭಿಸುತ್ತಿದ್ದಂತೆ ತ್ತಿದ್ದಂತೆ ಪೊಲೀಸರು ಪಿರನವಾಡಿ ಬಳಿಯೇ ಕರವೇ ಕಾರ್ಯಕರ್ತರನ್ನು ತಡೆದಿದ್ದಾರೆ. ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೇಯೇ ಪೊಲೀಸರು ದಬ್ಬಾಳಿಕೆ ನಡೆಸುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ನೂರಾರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲಿಂದ ಸದಾಶಿವ ನಗರದ ಅಂಬೇಡ್ಕರ್ ಭವನಕ್ಕೆ ಕರೆದುಕೊಂಡು ಹೋಗಿದ್ದಾರೆ.

ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; 7 ಜನರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button