ಪ್ರಗತಿವಾಹಿನಿ ಸುದ್ದಿ; ಹಾವೇರಿ: ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯರೊಂದಿಗೆ ಸಿಪಿಐ ಓರ್ವ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಈ ಘಟನೆ ನಡೆದಿದ್ದು, ಹಾವೇರಿ ಮಹಿಳಾ ಠಾಣೆ ಸಿಪಿಐ ಚಿದಾನಂದ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಅನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯರ ಜತೆ ಸಿಪಿಐ ಚಿದಾನಂದ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಮಹಿಳೆಯರಿಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಚಿದಾನಂದ ವಿರುದ್ಧ ಎಸ್.ಪಿ ಹಾಗೂ ಪೂರ್ವ ವಲಯ ಐಜಿಪಿಗೆ ಐವರು ಮಹಿಳೆಯರು ದೂರು ನೀಡಿದ್ದರು. ಅಲ್ಲದೇ ಸಿಪಿಐ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಕೂಡ ವೈರಲ್ ಆಗಿದ್ದು, ಇದೀಗ ಸಿಪಿಐ ಚಿದಾನಂದ ರನ್ನು ಸಸ್ಪೆಂಡ್ ಮಾಡಲಾಗಿದೆ.
ಎಂಇಎಸ್ ವಿರುದ್ಧ ಕನ್ನಡಿಗರ ಆಕ್ರೋಶ; ಪಿರನವಾಡಿಯಲ್ಲಿ ಕರವೇ ಬೃಹತ್ ಪ್ರತಿಭಟನೆ; ವಶಕ್ಕೆ ಪಡೆದ ಪೊಲೀಸರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ