ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ದುಷ್ಕರ್ಮಿಗಳು ಭಗ್ನಗೊಳಿಸಿದ ಸ್ಥಳದಲ್ಲೇ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ರಾಯಣ್ಣ ಸೇನೆ ಯುವಕರು ಸ್ಥಾಪನೆ ಮಾಡಿದ್ದಾರೆ.
ಆನಗೋಳದಲ್ಲಿ ಶನಿವಾರ ಮುಂಜಾನೆ ನಾಲ್ವರು ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯ ಖಡ್ಗ, ಡಾಲ್ ಕಿತ್ತೆಸೆದು, ಮುಖಕ್ಕೆಲ್ಲ ರಾಡ್ ನಿಂದ ಸ್ಕ್ರ್ಯಾಚ್ ಮಾಡಿದ್ದರು. ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆದಿತ್ತು.
ಇದೀಗ ಸ್ಥಳೀಯ ರಾಯಣ್ಣ ಸೇನೆ ಕಾರ್ಯಕರ್ತರು ಅದೇ ಮೂರ್ತಿಯನ್ನು ದುರಸ್ತಿ ಮಾಡಿ ಸ್ಥಾಪನೆ ಮಾಡಿದ್ದಾರೆ. ಸ್ಥಳದಲ್ಲಿ ಸಾವಿರಾರು ಜನರು ಸೇರಿ ಹಬ್ಬದ ಸಂಭ್ರಮ ಆಚರಿಸಿದರು. ಮಹಿಳೆಯರು ರಾಯಣ್ಣ ಪುತ್ಥಳಿಗೆ ಪೂಜೆ ಸಲ್ಲಿಸಿದರು.
ಆನಗೋಳದಲ್ಲಿ ಸಂಭ್ರಮ ಮನೆ ಮಾಡಿದೆ.
ಆನಗೋಳದಲ್ಲಿ ಮಧ್ಯರಾತ್ರಿ ರಾಯಣ್ಣ ಮೂರ್ತಿ ಭಗ್ನ ಮಾಡಿದ ದುಷ್ಕರ್ಮಿಗಳು; ಪೊಲೀಸ್ ಠಾಣೆ ಬಳಿ ಜಮಾಯಿಸಿದ ಯುವಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ