ಪ್ರಗತಿವಾಹಿನಿ ಸುದ್ದಿ; ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣದ 13 ಅಪರಾಧಿಗಳಿಗೆ 20 ವರ್ಷ ಹಾಗೂ ಇಬ್ಬರಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಕೋಟಾ ನ್ಯಾಯಾಲಯ ತೀರ್ಪು ನೀಡಿದೆ.
15 ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದ ದುಷ್ಕರ್ಮಿಗಳು ಆಕೆಯನ್ನು ಮಾರಾಟ ಮಾಡಿದ್ದರು. ಜಲಾವರ್ ಪ್ರದೇಶಕ್ಕೆ ಕೊಂಡೊಯ್ದ ಆರೋಪಿಗಳು 9 ದಿನಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದರು. ಸುಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬುಲ್ಬುಲ್ ಅಲಿಯಾಸ್ ಪೂಜಾ ಜೈನ್ ಎಂಬ ಮಹಿಳೆ ತನಗೆ ಆಮಿಷವೊಡ್ಡಿ ಕರೆದೊಯ್ದಿದ್ದಾಗಿ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಪ್ರಕರಣ ಸಂಬಂಧ 16 ಜನರನ್ನು ಬಂಧಿಸಲಾಗಿತ್ತು. ಮೇ 7ರಂದು ಪೊಲೀಸರು ನ್ಯಾಯಾಲಯಕ್ಕೆ 1750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.
ತ್ವರಿತ ವಿಚಾರಣೆ ನಡೆಸಿದ ಪೋಕ್ಸೋ ಕಾಯ್ದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅಶೋಕ್ ಚೌಧರಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದು, 13 ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ಹಾಗೂ ಇಬ್ಬರು ಅಪರಾಧಿಗಳಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ದೂರು ನೀಡಲು ಬಂದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ಸಿಪಿಐ ಸಸ್ಪೆಂಡ್
ಮಹಾ ಸಿಎಂ ಉದ್ಧವ್ ಠಾಕ್ರೆ ಆಕಾಶದಿಂದ ಇಳಿದು ಬಂದಿದ್ದಾರಾ?; ಕಿಡಿಕಾರಿದ ಈಶ್ವರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ