ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಲಿಕೆ ಎಂಬುದು ನಿರಂತರ ಪ್ರಕ್ರಿಯೆಯಾಗಿದೆ. ಕಲಿಕೆ ಜೀವನದಲ್ಲಿ ಅತ್ಯುತ್ತಮ ಮೌಲ್ಯಗಳನ್ನು ಅರಿತುಕೊಳ್ಳಲು ಸಹಕಾರಿಯಾಗುತ್ತದೆ. ಜೀವನದಲ್ಲಿ ಉತ್ತಮ ಗುರಿಯನ್ನು ಇಟ್ಟುಕೊಂಡು ಗುರಿಯ ಸಾಧನೆಗೆ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ವಿಟಿಯು ಉಪಕುಲಪತಿ ಡಾ. ಕರಿಸಿದ್ದಪ್ಪ ಹೇಳಿದರು. ನಗರದ ಕೆಎಲ್ಎಸ್ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಎಲ್ಎಸ್ ಸಂಸ್ಥೆಯ ಚೇರಮನ್ ಎಂ.ಆರ್. ಕುಲಕರ್ಣಿ, ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ಕಾರ್ಯಾಧ್ಯಕ್ಷ ವಿ.ಎಂ. ದೇಶಪಾಂಡೆ, ಪ್ರಾಚಾರ್ಯ ಡಾ. ಎಚ್.ಎಚ್. ವೀರಾಪೂರ ಉಪಸ್ಥಿತರಿದ್ದರು. ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ಪ್ರೊ. ಸೆಜಲ್ ಬಾಗಿ, ಪ್ರೊ. ರೂಪಾಲಿ ಕುಲಕರ್ಣಿ ನಿರ್ವಹಿಸಿದರು. ಪ್ರೊ. ಶಾಮಲ ಪಾಟೀಲ ವಂದಿಸಿದರು. ದರ್ಶನಾ ಹಾಗೂ ಸಂಪದಾ ನಿರೂಪಿಸಿದರು. ಉಪನ್ಯಾಸಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ