Kannada NewsKarnataka NewsLatest

ಎಂಇಎಸ್ ವಿರುದ್ಧ ಕರವೇ ಆಕ್ರೋಶ; ಸುವರ್ಣ ಸೌಧ ಚಲೋ ಆರಂಭಿಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಂಇಎಸ್, ಶಿವಸೇನೆ ಪುಂಡಾಟದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸುತ್ತಿದ್ದು, ಸುವರ್ಣ ವಿಧಾನಸೌಧ ಚಲೋ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ನಾಲ್ಕು ಕಡೆಗಳಿಂದ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ಹಿರೇಬಾಗೇವಾಡಿ ಟೋಲ್ ನಿಂದ ಒಂದು ಮೆರವಣಿಗೆ, ಬಾಗಲಕೋಟೆ ಮಾರ್ಗದಿಂದ ಮತ್ತೊಂದು ಪ್ರತಿಭಟನಾ ಮೆರವಣಿಗೆ, ಚನ್ನಮ್ಮ ವೃತ್ತದಿಂದ ಹಾಗೂ ಪೀರನವಾಡಿಯಿಂದ ಬೈಕ್ ಹಾಗೂ ಕಾರುಗಳ ಮೂಲಕ ಪ್ರತಿಭಟನಾ ಮೆರವಣಿಗೆ ಮೂಲಕ ಸುವರ್ಣ ಸೌಧದತ್ತ ಕರವೇ ಕಾರ್ಯಕರ್ತರು ಧಾಸುತ್ತಿದ್ದು, ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಹೋರಾಟ ಆರಂಭವಾಗಿದೆ.

ಎಂಇಎಸ್ ಹಾಗೂ ಶಿವಸೇನೆ ಪುಂಡರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಎಂಇಎಸ್ ನಿಷೇಧಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನೆ, ಮೆರವಣಿಗೆಗೆ ಅವಕಾಶವಿಲ್ಲ ಹಾಗಾಗಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಕರವೇ ಯತ್ನವನ್ನು ತಡೆಯಲಾಗುವುದು ಎಂದು ಡಿಸಿಪಿ ವಿಕ್ರಮ ಆಮಟೆ ತಿಳಿಸಿದ್ದಾರೆ. ಒಟ್ಟಾರೆ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಒಮಿಕ್ರಾನ್ ಸ್ಫೋಟ; ಮತ್ತೆ 5 ಜನರಲ್ಲಿ ರೂಪಾಂತರಿ ಸೋಂಕು ಧೃಢ
ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಳ ಆನಗೋಳಕ್ಕೆ ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ಭೇಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button