ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನಿಸಿದ ಘಟನೆಗೆ ಸಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿನ್ ಓಮಣ್ಣ ಗುರವ್, ಸಂಜು ಓಮಣ್ಣ ಗುರವ್ ಮತ್ತು ಗಣೇಶ ಕೃಷ್ಣಾಜಿ ಪೆಡ್ನೇಕರ್ ಬಂಧಿತರು.
ಗ್ರಾಮದ ಬಸವೇಶ್ವರ ವೃತ್ತದ ಬಸವೇಶ್ವರ ಭಾವಚಿತ್ರಕ್ಕೆ ಸೆಗಣಿ ಎರಚಿದ ದುಷ್ಕರ್ಮಿಗಳು ವೃತ್ತದಲ್ಲಿ ಅಳವಡಿಸಿದ್ದ ಬಸವೇಶ್ವರ ವೃತ್ತ ಕನ್ನಡ ನಾಮಫಲಕಕ್ಕೆ ಮಸಿ ಬಳಿದಿದ್ದರು. ಜೊತೆಗೆ ಗ್ರಾಮ ಪಂಚಾಯತಿ ಆವರಣದಲ್ಲಿದ್ದ ಕನ್ನಡ ಬಾವುಟವನ್ನು ಕಿತ್ತುಹಾಕಿದ್ದರು.
ಬೆಳಗಾವಿಯಲ್ಲಿ ವಿಧಾನ ಮಂಡಳದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನಡೆದ ಈ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿತ್ತು.
ಅಲ್ಲದೆ ಮಂಗಳವಾರ ಬೆಳಗ್ಗೆ 11.30ಕ್ಕೆ ಈ ಸಂಬಂಧ ಬಸವಾಭಿಮಾನಿಗಳು ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಲು ನಿರ್ಧರಿಸಿದ್ದರು.
ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ : ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ