
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸೋಂಕು, ಒಮಿಕ್ರಾನ್ ಭೀತಿ ನಡುವೆಯೇ ಕ್ರಿಸ್ ಮಸ್, ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯ ಸರ್ಕಾರ ಸಂಭ್ರಮಾಚರಣೆಗೆ ಕೆಲ ನಿರ್ಬಂಧ ವಿಧಿಸಿದೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕ್ರಿಸ್ ಮಸ್ ಹಬ್ಬಕ್ಕೆ ಚರ್ಚ್ ಗಳಿಗೆ ಹೋಗಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧವಿಲ್ಲ. ಆದರೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬಹಿರಂಗ ಪಾರ್ಟಿ ಆಯೋಜನೆಗೆ ಕಡಿವಾಣಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ವರ್ಷಾಚರಣೆಗೆ ಜನರು ಗುಂಪುಗೂಡಲು ಅವಕಾಶವಿಲ್ಲ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿಯೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಸಾಮೂಹಿಕ ಸಮಾರಂಭ, ಪಾರ್ಟಿ ಆಯೋಜನೆ ಮಾಡುವಂತಿಲ್ಲ ಡಿಸೆಂಬರ್ 30ರಿಂದ ಜನವರಿ 2ರವರೆಗೂ ನಿಯಮ ಅವಯವಾಗಲಿದೆ ಎಂದರು.
ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದ್ದು, ಸಿಬ್ಬಂದಿಗಳು 2 ಡೊಸ್ ವ್ಯಾಕ್ಸಿನ್ ಪಡೆದಿರಬೇಕು ಎಂದು ತಿಳಿಸಿದರು.
ವಿಪಕ್ಷಗಳ ವಿರೋಧದ ನಡುವೆ ಮತಾಂತರ ನಿಷೇಧ ಮಸೂದೆ ಮಂಡನೆ