Kannada NewsLatest

ಪ್ರತಿಭಟನೆಕಾರರ ಅಹವಾಲು ಆಲಿಸಿದ ಕೆಪಿಸಿಸಿ ಟೀಂ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಸುವರ್ಣ ​ವಿಧಾನ​ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ವಿವಿಧ ಸಂಘ​ಟನೆ​ಗಳು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡುವ ಸಲುವಾಗಿ ನಡೆಸುತ್ತಿರುವ ಪ್ರತಿಭಟನೆಯ ಸ್ಥಳಕ್ಕೆ ಅಹವಾಲು ಸಮಿತಿ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದ ತಂಡ ಭೇಟಿ ನೀಡಿ ಅಹವಾಲು ಆಲಿಸಿತು.
 
ಸತೀಶ್ ಜಾರಕಿಹೊಳಿ ಜೊತೆಗೆ, ತಂಡದ ಸದಸ್ಯರೂ, ಶಾಸಕರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಸಚಿವೆ ಉಮಾಶ್ರೀ, ಎನ್ಎಸ್ ಯು ಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೀರಲಗಿ ಮತ್ತಿತರರು  ಸ್ಥಳಕ್ಕೆ ತೆರಳಿ ಪ್ರತಿಭಟನೆಕಾರರನ್ನುದ್ದೇಶಿಸಿ ಮಾತನಾಡಿದರಲ್ಲದೆ, ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.
 
ಪ್ರತಿಭಟನೆಕಾರರ ಅಹವಾಲು ಆಲಿಸಲೆಂದೇ  ಕೆಪಿಸಿಸಿ ಪ್ರತ್ಯೇಕ ತಂಡಗಳನ್ನು ನೇಮಕ ಮಾಡಿದ್ದು, ಈ ತಂಡಗಳ ಉದ್ದೇಶವೆಂದರೆ ಸಾರ್ವಜನಿಕರ, ವಿವಿಧ ಸಂಘ​ಟನೆ​ಗಳ ಕುಂದುಕೊರತೆಗಳನ್ನು ಆಲಿಸಿ, ಸರ್ಕಾರ ಗಮನಕ್ಕೆ ತಂದು, ಸರ್ಕಾರದ ಮನವೊಲಿಸಿ,  ಬೇಡಿಕೆಗಳನ್ನು ಈಡೇರಿಸುವುದಾಗಿದೆ.
ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಎಲ್ಲರನ್ನೂ ಕೆಪಿಸಿಸಿ ತಂಡ ಭೇಟಿ ಮಾಡಿತು. ಬೇಡಿಕೆಗಳನ್ನು ಅಭ್ಯಸಿಸಿ, ಕ್ರೋಢೀಕರಣ ಮಾಡಿ ಸರಕಾರದ ಮೇಲೆ ಒತ್ತಡ ಹೇರಿ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ತಂಡದ ಸದಸ್ಯೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button