Latest

ನ್ಯಾಯಾಲಯದಲ್ಲಿ ಸ್ಫೋಟ; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಲುಧಿಯಾನ: ಇತ್ತೀಚೆಗೆ ದೆಹಲಿ ರೋಹಿಣಿ ಕೋರ್ಟ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಇದೀಗ ಪಂಜಾಬ್ ನ ಲುಧಿಯಾನಾ ಕೋರ್ಟ್ ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಲುಧಿಯಾನಾ ಜಿಲ್ಲಾ ಕೋರ್ಟ್ ನ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಕಟ್ಟಡ ಛಿದ್ರಗೊಂಡಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೋರ್ಟ್ ನ ವಾಶ್ ರೂಂ ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸಿದೆ.
9 ವರ್ಷದ ಬಾಲಕಿಯಲ್ಲಿ ಒಮಿಕ್ರಾನ್ ಸೋಂಕು; ರಾಜ್ಯದಲ್ಲಿ ಮತ್ತೊಂದು ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button