ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಐಪಿಎಲ್ ಸೇರಿದಂತೆ ಎಲ್ಲಾ ವಿಧದ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ವಿಡಿಯೋ ಮೂಲಕ ಮಾಹಿತಿ ನೀಡಿರುವ ಹರ್ಭಜನ್, 23 ವರ್ಷಗಳ ಕ್ರಿಕೆಟ್ ಬದುಕಿಗೆ ವಿದಾಯ ಹೇಳುತ್ತಿದ್ದು, ಯಶಸ್ಸಿಗೆ ಕಾರಣರಾದ ಗುರುಗಳಿಗೆ ಧನ್ಯವಾದ ತಿಳಿಸಿದ್ದಾರೆ.
1998ರಲ್ಲಿ ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಹರ್ಭಜನ್ ಕಾಲಿಟ್ಟಿದ್ದರು. ನಂತರ ಅದೇ ವರ್ಷ ನ್ಯೂಜಿಲ್ಯಾಂಡ್ ವಿರುದ್ಧದ ಒಡಿಐ ಮೊದಲ ಪಂದ್ಯವನ್ನಾಡಿದ್ದರು. 2006ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಗೆ ಪದಾರ್ಪಣೆ ಮಾಡಿದರು.
ಅನಿಲ್ ಕುಂಬ್ಳೆ ಹಾಗೂ ಆರ್.ಅಶ್ವಿನ್ ಬಳಿಕ ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಕೀರ್ತಿಗೆ ಹರ್ಭಜನ್ ಪಾತ್ರರಾಗಿದ್ದಾರೆ. 103 ಟೆಸ್ಟ್ ಪಂದ್ಯ-417 ವಿಕೆಟ್, 236 ಏಕದಿನ ಪಂದ್ಯ- 269 ವಿಕೆಟ್, 163 ಐಪಿಎಲ್ ಪಂದ್ಯಗಳಲ್ಲಿ 150 ವಿಕೆಟ್ ಗಳಿಸಿದ ಕೀರ್ತಿ ಹರ್ಭಜನ್ ಅವರದ್ದು.
ಕ್ರೀಕೆಟ್ ಗೆ ಹರ್ಭಜನ್ ನಿವೃತ್ತಿ ಘೋಷಿಸಿರುವ ಬೆನ್ನಲ್ಲೇ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಳಗಾವಿ ಅಧಿವೇಶನ ಅನಿರ್ದಿಷ್ಟಾವದಿಗೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ