Latest

ಗೋಲ್ಡ್ ಖರೀದಿಗೆ ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ಚಿನ್ನ, ಬೆಳ್ಳಿ ದರ ಬದಲಾವಣೆ ಸಾಮಾನ್ಯ. ಆದರೆ ಕ್ರಿಸ್ ಮಸ್, ಹೊಸ ವರ್ಷದ ಸಂಭ್ರಮದ ವೇಳೆ ಬಂಗಾರದ ಬೆಲೆ ಎಷ್ಟಿದೆ ಎಂಬ ಕುತೂಹಲ ಎಲ್ಲರಲ್ಲಿ ಇದ್ದೇ ಇರುತ್ತೆ.

ಆಭರಣ ಕೊಳ್ಳಲು ಪ್ಲಾನ್ ಮಾಡಿದ್ದರೆ ಇಂದಿನ ಚಿನ್ನ ಬೆಳ್ಳಿ ದರ ಯಾವ ನಗರದಲ್ಲಿ ಎಷ್ಟಿದೆ ಇಲ್ಲಿದೆ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ದರ 62,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,000 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,300 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,83,000 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 62,300 ರೂಪಾಯಿ ಆಗಿದೆ.

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,100 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,650 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,96,500 ರೂಪಾಯಿ ನಿಗದಿಯಾಗಿದೆ.

ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 66,200 ರೂಪಾಯಿ ಆಗಿದೆ.

ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಇದ್ದು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಇದೆ.
ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ; ಸುಳಿವು ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button