ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಲೆಕ್ಕಾಚಾರಗಳು ಆರಂಭವಾಗಿವೆ.
ನಳೀನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆಯೂ ಬಿಜೆಪಿ ಪಾಳಯದಲ್ಲಿ ಚರ್ಚೆ ಆರಂಭವಾಗಿದೆ.
ಒಂದೊಮ್ಮೆ ನಳೀನ್ ಕುಮಾರ್ ಅವರನ್ನು ಬದಲಾವಣೆ ಮಾಡಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂದಾಯ ಸಚಿವ ಆರ್.ಅಶೋಕ್ ಅವರ ಹೆಸರು ಕೇಳಿಬಂದಿದೆ. ಅಲ್ಲದೇ ನಳೀನ್ ಕುಮಾರ್ ಕಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಅಭಿಪ್ರಾಯಗಳು ವ್ಯಕ್ತವಾಗಿವೆ ಎಂದು ಹೇಳಲಾಗುತ್ತಿದೆ.
ಜಾತಿ ಲೆಕ್ಕಾಚಾರದ ಮೇಲೆ ಮಹತ್ವದ ಹುದ್ದೆಗಳನ್ನು ನಿರ್ಣಯಿಸಲು ಬಿಜೆಪಿ ಮುಂದಾಗಿದೆ. ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಜಾತಿ ಮತ್ತು ಉತ್ತರ – ದಕ್ಷಿಣ ಎಲ್ಲವನ್ನೂ ಲೆಕ್ಕಾಚಾರ ಹಾಕಲಾಗುತ್ತಿದೆ. ಲಿಂಗಾಯತ , ಒಕ್ಕಲಿಗ ಎರಡೂ ಜಾತಿ ಸಮಾಧಾನ ಪಡಿಸಲು ನಿರ್ಧರಿಸಲಾಗಿದೆ.
ವಿದೇಶ ಪ್ರವಾಸ : ಸ್ಪಷ್ಟನೆ ನೀಡಿ ಗೊಂದಲಕ್ಕೆ ತೆರೆ ಎಳೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ