Latest

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ, ಬಹಿರಂಗವಾಗಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಸಭೆ-ಸಮಾರಂಭಗಳಿಗೆ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೋಟೆಲ್, ಪಬ್, ರೆಸ್ಟೋರೆಂಟ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.

ಮೊದಲ ಡೋಸ್ ಶೇ.90ರಷ್ಟು ಜನರಿಗೆ ಹಾಕಲಾಗಿದ್ದು, ಶೇ.75ರಷ್ಟು ಜನರು 2ನೇ ಡೋಸ್ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿದ್ದು 38 ಜನರಲ್ಲಿ ರೂಪಾಂತರಿ ವೈರಸ್ ಪತೆಯಾಗಿದೆ. ಒಮಿಕ್ರಾನ್ ಪ್ರಕರಣ ಬಹಳ ವೇಗವಾಗಿ ಹರಡುತ್ತಿದ್ದು, ಜನರು 2ನೇ ಡೋಸ್ ಲಸಿಕೆಯನ್ನು ತಕ್ಷಣ ಪಡೆದುಕೊಳ್ಳಬೇಕು. 2 ಡೊಸ್ ಲಸಿಕೆ ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಹಾಗಾಗಿ ಲಸಿಕೆ ಬಗ್ಗೆ ನಿರ್ಲಕ್ಷ ಬೇಡ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತ ಸಭೆಯಲ್ಲಿ, ಕಂದಾಯ ಸಚಿವ ಆರ್. ಅಶೋಕ, ಆರೋಗ್ಯ ಸಚಿವ ಡಾ. ಸುಧಾಕರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

ಮಕ್ಕಳಿಗೂ ಕೋವಿಡ್ ಲಸಿಕೆ; ಪ್ರಧಾನಿ ಮೋದಿಗೆ ಸಿಎಂ ಧನ್ಯವಾದ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button