Latest

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಸಲ್ಮಾನ್ ಖಾನ್ ತಮ್ಮ ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಿದ್ದಾಗ ಇಂದು ಮುಂಜಾನೆ ಸಲ್ಮಾನ್ ಅವರ ಕಾಲಿಗೆ ಹಾವು ಕಚ್ಚಿದ್ದು, ತಕ್ಷಣ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಸಲ್ಮಾನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಸಲ್ಮಾನ್ ಖಾನ್ ಎಂಜಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಸಲ್ಮಾನ್ ಅವರ ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು, ವಿಷಪೂರಿತವಲ್ಲದ ಹಾವು ಕಡಿದಿದ್ದರಿಂದ ಹೆಚ್ಚಿನ ತೊಂದರೆಯಾಗಿಲ್ಲ ಎನ್ನಲಾಗಿದೆ.

ಮಿಲಿಟರಿ ದಾಳಿಗೆ ಮಕ್ಕಳು, ಮಹಿಳೆಯರು ಸೇರಿ 30ಕ್ಕೂ ಹೆಚ್ಚು ಜನ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button