Kannada NewsKarnataka NewsLatest

ಅಪೆಕ್ಸ್ ಬ್ಯಾಂಕ್ ವತಿಯಿಂದ ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ​ ಬೆಂಗಳೂರು – ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಸೋಮವಾರ ಬೆಂಗಳೂರಿನ ಬ್ಯಾಂಕಿನ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.
​ಸನ್ಮಾನ ಸ್ವೀಕರಿಸಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಸನ್ಮಾನಿಸಿದ್ದಕ್ಕಾಗಿ ಬ್ಯಾಂಕಿನ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ, ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ​
ಈ ಸಂದರ್ಭದಲ್ಲಿ ಅಪೆಕ್ಷ ಬ್ಯಾಂಕ್ ನ​ ಮುಖ್ಯ ಕಾರ್ಯನಿರ್ವಹಣಾಧಿಕಾರಿ​ ದೇವರಾಜ್, ​ಪ್ರಧಾನ ವ್ಯವಸ್ಥಾಪಕರಾದ ಲೀನಾಕುಮಾರ ​ ಹಾಗೂ​ ಬ್ಯಾಂಕಿನ ಎಲ್ಲ ಅಧಿಕಾರಿಗಳು​, ಸಿಬ್ಬಂದಿ​ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button