ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಮೈಸೂರು ವಿಶ್ವ ವಿದಾಲಯದ ವಿದ್ಯಾರ್ಥಿನಿಯೋರ್ವರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.
ತಾಂಜೇನಿಯಾದಿಂದ ಡಿಸೆಂಬರ್ 20ರಂದು ಮೈಸೂರಿಗೆ ಆಗಮಿಸಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಸೋಂಕಿತೆಯ ಸ್ಯಾಂಪಲ್ ಜೆನೋಮಿಕ್ ಸೀಕ್ವೆನ್ಸಿಗೆ ಕಳುಹಿಸಲಾಗಿದ್ದು, ಇದೀಗ ವರದಿ ಬಂದಿದ್ದು, ಒಮಿಕ್ರಾನ್ ದೃಢಪಟ್ಟಿದೆ.
ವಿದ್ಯಾರ್ಥಿನಿಯ ಸಂಪರ್ಕದಲ್ಲಿರುವವರನ್ನು ಜಿಲ್ಲಾಡಳಿತ ಪತ್ತೆ ಹಚ್ಚುತ್ತಿದ್ದು, ಸೋಂಕಿತೆಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಎಫ್ ಐಆರ್ ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ