ಪ್ರಗತಿವಾಹಿನಿ ಸುದ್ದಿ; ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿ ಚಾರ್ಜ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಕೋಟ ಪೊಲೀಸ್ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಸಸ್ಪೆಂಡ್ ಆದ ಅಧಿಕಾರಿ. ಕೋಟತೊಟ್ಟು ಕೊರಗ ಕಾಲೋನಿಯ ಮದುವೆ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದ ವೇಳೆ ಲಾಠಿಚಾರ್ಜ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಉಡುಪಿ ಜಿಲ್ಲಾ ಎಸ್ ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಬಂದ್ ಕರೆ ಕೊಟ್ಟವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕೊಟ್ಟ ಖಡಕ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ