ಮಾತಿನಿಂದ ಬಹಳ ಹೊತ್ತು ಜನರ ಮನದಲ್ಲಿರಲು ಸಾಧ್ಯವಿಲ್ಲ; ಕ್ರಿಯಾಶೀಲತೆಯಿಂದ ಮಾತ್ರ ಜನರ ಮನಗೆಲ್ಲಲು ಸಾಧ್ಯ; ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬಿ.ಎಸ್.ಯಡಿಯೂರಪ್ಪನವರ ನಾಯಕತ್ವ ಸುದೀರ್ಘವಾಗಿ ಪಕ್ಷಕ್ಕಿದೆ. ಅವರ ಅಧಿಕಾರಾವಧಿ ಬಳಿಕ ನಾನು ಸಿಎಂ ಆಗಿ ಅಧಿಕಾರ ಸ್ವೀಕರಿಸಿದಾಗ ಹಲವು ನಿರೀಕ್ಷೆಗಳು ಎದುರಾಗುವುದು ಸಹಜ. ಆ ಪ್ರಶ್ನೆಗಳಿಗೆ ನಮ್ಮ ನಿರ್ಣಯ, ಕಾರ್ಯದಕ್ಷತೆಯ ಮೂಲಕ ನಮ್ಮ ಪಕ್ಷ, ಕಾರ್ಯಕರ್ತರಿಗೆ, ಜನರಿಗೆ ಉತ್ತರ ಕೊಡಬೇಕಾಗುತ್ತದೆ. ನಾನು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಎದುರಾದ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಎದುರುಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಾತಿನಿಂದ ಬಹಳ ಹೊತ್ತು ಜನರ ಮನ ಗೆಲ್ಲಲು ಸಾಧ್ಯವಿಲ್ಲ, ನಮ್ಮ ಕ್ರಿಯಾಶೀಲತೆಯಿಂದ ಮಾತ್ರ ಜನರ ಮನ ಗೆಲ್ಲಲು ಸಾಧ್ಯ. ಯಾವಾಗ ಸರ್ಕಾರದ ಯೋಜನೆಗಳು, ನಮ್ಮ ಕೆಲಸಗಳು ಜನರ ಮನೆ ಬಾಗಿಲು ತಲುಪತ್ತದೆ. ಆಗ ಮಾತ್ರ ಅರ್ಥ ಬರುತ್ತದೆ. ಇಲ್ಲದಿದ್ದರೆ ಶಬ್ಧ ಶಬ್ಧವಾಗಿಯೇ ಇರುತ್ತದೆ. ಈ ಅರಿವಿನಿಂದ ಸಚಿವ ಸಂಪುಟದ ಸಹೋದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮದು ಅರಿವಿರುವ ಸರ್ಕಾರ. ಆಗು ಹೋಗುಗಳ ಬಗ್ಗೆ ಸೂಕ್ಷ್ಮತೆಯನ್ನು ಗಮನಿಸಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರ ಬಿಜೆಪಿ ಸರ್ಕಾರ ಎಂದರು.
ಅಕಾಲಿಕ ಮಳೆಯಿಂದಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆ ಬೃಹತ್ ಪ್ರಮಾಣದಲ್ಲಿ ನಷ್ಟವುಂಟಾಯಿತು. ರೈತ ಬೆಳೆದ ಫಸಲು ಇನ್ನೇನು ಕೈಗೆ ಸಿಗಬೇಕು ಎನ್ನುವಷ್ಟರಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ನಾಶವಾಯಿತು. ಇಂತಹ ಸಂದರ್ಭದಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿದ 20 ದಿನಗಳಲ್ಲಿ 48 ಗಂಟೆ ಒಳಗಾಗಿ ನೇರವಾಗಿ ರೈತರ ಖಾತೆಗೆ ಪರಿಹಾರ ಧನ ವಿತರಿಸುವ ಕೆಲಸ ಮಾಡಿರುವುದು ರಾಜ್ಯದ ಇತಿಹಾಸದಲ್ಲಿಯೇ ದಾಖಲೆ. ಹಿಂದೆ ಪರಿಹಾರ ಹಣ ಪಡೆಯಲು 6-7 ತಿಂಗಳು ಕಾಯಬೇಕಿತ್ತು. ಆದರೆ ಈ ವ್ಯವಸ್ಥೆಯನ್ನು ಬದಲಾಯಿಸಿ ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯಾಗಿದೆ. ಕಾಯ್ದೆ ಜಾರಿಗೆ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ಮೋದಿಯಿಂದ ಉದ್ಘಾಟನೆ ಮಾಡಿಸಲಾಗುವುದು ಎಂದರು.
ಬೆಳಗಾವಿ, ನಿಪ್ಪಾಣಿಯಲ್ಲಿ ಎಸಿಬಿ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ