ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ಬಲಾಬಲ ನಿರ್ಧರಿಸುವ ಫಲಿತಾಂಶ ಇದಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಜಯ ಸಾಧಿಸಿದೆ.
ಇನ್ನು ಬೆಳಗಾವಿಯಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗಿದ್ದು, ಕುಂದಾನಗರಿಯಲ್ಲಿ ಕಾಂಗ್ರೆಸ್ ಹಾಗೂ ಪಕ್ಷೇತರರ ಪಾರುಪತ್ಯ ಹೆಚ್ಚಿದೆ.
ಅರಬಾವಿಯ 16ವಾರ್ಡ್ ಗಳಲ್ಲಿ 11ರಲ್ಲಿ ಪಕ್ಷೇತರರು ಗುಲುವು ಸಾಧಿಸಿದ್ದಾರೆ. 5 ವಾರ್ಡ್ ಗಳಲ್ಲಿ ಮಾತ್ರ ಬಿಜೆಪಿ ಗೆಲುವು ಪಡೆದಿದೆ. ಕಲ್ಲೋಳಿಯ 11 ಪಟ್ಟಣ ಪಂಚಾಯಿತಿಯಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ಲ್ಯಾನ್ ಸಕ್ಸಸ್ ಆಗಿದೆ.
ಉಗಾರ್ ಖುರ್ದ ಪುರಸಭೆ ಅತಂತ್ರವಾಗಿದೆ. 23 ಸ್ಥಾನದಲ್ಲಿ ಕಾಂಗ್ರೆಸ್ 11ರಲ್ಲಿ ಗೆಲುವು ಸಾಧಿಸಿದೆ. ನಿಪ್ಪಾಣಿ ಪಟ್ಟಣ ಪಂಚಾಯಿತಿ ಪಕ್ಷೇತರ ಪಾಲಾಗಿದೆ.
ಯಕ್ಸಾಂಬಾ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಿದೆ. ಬೋರಗಾಂವ ಪಟ್ಟಣ ಪಂಚಾಯಿತಿ ಅತಂತ್ರವಾಗಿದೆ. ಶೇಡಬಾಳ ಪಟ್ಟಣ ಪಂಚಾಯಿತಿ ಬಿಜೆಪಿ ವಶವಾಗಿದೆ. ಎಂಕೆಹುಬ್ಬಳ್ಳಿಯಲ್ಲಿ ಪಕ್ಷೇತರರೇ ಜಯ ಸಾಧಿಸಿದ್ದಾರೆ.
ಐನಾಪುರ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಿದೆ. ಇಲ್ಲಿ ಶ್ರೀಮಂತ ಪಾಟೀಲ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ರೂಪಾಂತರಿ ವೈರಸ್ ಜತೆಗೆ ಕೋವಿಡ್ ಸೋಂಕಿತರ ಸಂಖ್ಯೆಯೂ ದಿಢೀರ್ ಏರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ